ಮಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.
ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರಿತೇನೆ. ಈ ಬಗ್ಗೆ ತನಿಖೆಯಾಗಬೇಕು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರಬರಲಿದೆ ಎಂದಿರುವ ಕಟೀಲ್, ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಾರ್ಟಿಗೆ ಆತ್ಮ ಯಡಿಯೂರಪ್ಪ. ಯಡಿಯೂರಪ್ಪ ನಮ್ಮ ಸರ್ವ ಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದಿದ್ದಾರೆ.
ಇದನ್ನೂ ಓದಿ:ಶಾಸಕರು ದೆಹಲಿಗೆ ಹೋದರೆ ತಪ್ಪೇನು?: ನಳೀನ್​ ಕುಮಾರ್​ ಕಟೀಲ್​
“ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ಬಳಿಕ ಉತ್ತರ ನೀಡ್ತೇನೆ” ಎಂದಿರುವ ಕಟೀಲ್​, ಇವತ್ತು ಅಧಿವೇಶನಕ್ಕೆ ಹೋಗ್ತಾ ಇದ್ದು, ಆಡಿಯೋ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.
ಬಿಎಸ್​​ವೈ ವಿರುದ್ಧ ಪಿತೂರಿ | ಯಡಿಯೂರಪ್ಪ ಪದಚ್ಯುತಿಗೆ ಬಿಜೆಪಿಯೊಳಗೇ ಸಂಚು: ಕಟೀಲ್ ಆಡಿಯೋ ವೈರಲ್; ಶೆಟ್ಟರ್-ಈಶ್ವರಪ್ಪಗೂ ಸಂಕಷ್ಟ

VIDEO | ಡ್ರಗ್ಸ್​ ಮೇಲೆ ಬುಲ್ಡೋಜರ್​ ಓಡಿಸಿದರು ಈ ಮುಖ್ಯಮಂತ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
