ಬೆಂಗಳೂರು:ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ವರುಣದೇವ ಕೆಲವೆಡೆ ಕೃಪೆ ತೋರಿದ್ದಾನೆ. ಸಾಮಾನ್ಯವಾಗಿ ತಾಪಮಾನ ಹೆಚ್ಚಳವಾದಾಗ ಮಳೆ ಬರುವುದು ವಾಡಿಕೆ. ಅದರಂತೆ ರಾಜ್ಯದ 11ಕ್ಕೂ ಹೆಚ್ಚು  ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಂತೆ ಏಪ್ರಿಲ್​ 29ರಿಂದ ಮೂರು ದಿನಗಳ ಕಾಲ ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಇದನ್ನೂ ಓದಿ:ಎಸ್​ಆರ್​ಎಚ್​ ವಿರುದ್ಧ 35 ರನ್​ಗಳ ಜಯ; ಆರ್​ಸಿಬಿ ನಾಯಕ ಫಾಫ್​ ಹೇಳಿದ್ದಿಷ್ಟು
ಮೇ 01ರಿಂದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೆಲವೆಡೆ ಈಗಾಗಲೇ ಹಗುರ ಮಳೆ ಸುರಿಯುತ್ತಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 2 =
Remember me
