ಬೆಂಗಳೂರು:ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
ಇದನ್ನೂ ಓದಿ:ಬೆಂಗಳೂರು ಸೇರಿದಂತೆ ರಾಜ್ಯ ವಿವಿಧೆಡೆ ಧಾಕಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ನಗರದಲ್ಲಿ ಸುರಿದ ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಧಾರಾಕಾರ ಮಳೆಯಿಂದ ನಗರದಲ್ಲಿ ನಾಲ್ಕು ಮರಗಳು ಧರೆಗೆ ಉರುಳಿವೆ. ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ  2 ಮರಗಳು ಧರೆಗುರುಳಿವೆ.
ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಹಿಂಗಾರು ಕೈ ಹಿಡಿಯುವ ಆಶಾಭಾವನೆ ಮೂಡಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ (ನ.06) ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಅಂಡರ್​ಪಾಸ್​ಗಳಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
