ಬೆಂಗಳೂರು:ಮಧ್ಯ ಮಹಾರಾಷ್ಟ್ರದಿಂದ ತಮಿಳುನಾಡುವರೆಗೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ. ಬುಧವಾರವೂ ಬೆಂಗಳೂರು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 48 ತಾಸು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಏ.15ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಬೆಂಗಳೂರು, ಬೆಂ. ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರಿನಲ್ಲಿ ಏ.15, 16ರಂದು ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + nine =
Remember me
