ಬೆಂಗಳೂರು:ನಾಲ್ಕೈದು ದಿನಗಳಲ್ಲಿ ನೈಋತ್ಯ ಮುಂಗಾರು ಮಾರುತಗಳು ಇನ್ನಷ್ಟು ಪ್ರಬಲಗೊಳ್ಳುವ ಸಾಧ್ಯತೆ ಇರುವುದರಿಂದ ರಾಜ್ಯದಲ್ಲಿ ಜೋರು ಮಳೆ ಬೀಳಲಿದೆ. ಕೆಲವು ಭಾಗಗಳಲ್ಲಿ ಈಗಾಗಲೇ ಭರ್ಜರಿ ವರ್ಷಧಾರೆಯಾಗಿದ್ದು, ಭಾನುವಾರ ಬೆಳಗಾವಿಯ ಹಿಡಕಲ್ ಡ್ಯಾಂ 80 ಮಿಮೀ ಮತ್ತು ಬೆಂಗಳೂರು 70 ಮಿಮೀ ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಜೂ. 20ರಿಂದ ಜೂ.23ರವರೆಗೆ ಭಾರಿ ಮಳೆ ಬೀಳುವ ಮೂನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೈಸೂರು, ರಾಮನಗರ, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.
ದೇಶಾದ್ಯಂತ ಜೂ.23ರ ನಂತರ ಮುಂಗಾರು ಪ್ರಬಲಗೊಳ್ಳಲಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮತ್ತೊಂದು ಭೀಕರ ಅಪಘಾತ; ಅಪ್ಪನ ದಿನದಂದೇ ಇನ್ನೊಂದು ತಂದೆ-ಮಗನ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − seven =
Remember me
