ಬೆಂಗಳೂರು:ರಾಜ್ಯದ ಹಲವೆಡೆ ಭಾನುವಾರವೂ ಮಳೆ ಅಬ್ಬರಿಸಿದೆ. ಚಿತ್ರದುರ್ಗದ ಹಿರಿಯೂರು, ಮಂಡ್ಯ, ಬೆಂ. ಗ್ರಾಮಾಂತರದ ದೊಡ್ಡಬಳ್ಳಾಪುರ, ಚಾಮರಾಜನಗರದ ಹರದನಹಳ್ಳಿ, ಚಿಕ್ಕಬಳ್ಳಾಪುರ, ಕಲಬುರಗಿಯ ಅಳಂದ, ಶಿವಮೊಗ್ಗದ ಆಗುಂಬೆ ಸೇರಿ ರಾಜ್ಯದ ವಿವಿಧೆಡೆ ವರ್ಷಧಾರೆಯಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಬೆಂ.ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರಿನಲ್ಲಿ ಆ.20ರಂದು ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಚಿಕ್ಕಮಗಳೂರು, ದಾವಣಗೆರೆಯಲ್ಲಿ ಆ.21ರಂದು ಯೆಲ್ಲೋ ಅರ್ಲಟ್​ ಇರಲಿದೆ.ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿ.ಸೆ.ಮತ್ತು 22 ಡಿ.ಸೆ.ಇರಲಿದೆ.
ಉದ್ಯಾನನಗರಿಯಲ್ಲಿ ಮಳೆಗಾಲದಲ್ಲೂ ವಾಡಿಕೆಗಿಂತ ಅಧಿಕ ಉಷ್ಣಾಂಶ
ವಾಡಿಕೆಯಷ್ಟೇ ಮಳೆಜುಲೈನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದ ರಾಜ್ಯದಲ್ಲಿ ಪ್ರಸ್ತುತ ತಿಂಗಳಲ್ಲಿ ವಾಡಿಕೆಯಷ್ಟೇ ಸುರಿದಿದೆ. ಆದರೂ 8 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ. ಅ.1ರಿಂದ ಆ.18ರವರೆಗೆ ವಾಡಿಕೆಯಂತೆ 146 ಮಿಮೀ ಮಳೆಯಾಗಬೇಕಿತ್ತು. ಆದರೆ, 142 ಮಿಮೀ ಬಿದ್ದಿದ್ದು, ವಾಡಿಕೆಗಿಂತ ಶೇ.3 ಕಡಿಮೆ ಸುರಿದಿದೆ. ದಣ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಸುರಿದರೆ, ಉತ್ತರ ಕರ್ನಾಟಕದಲ್ಲಿ ವಾಡಿಕೆಯಷ್ಟೇ ಬಿದ್ದಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಅಂಕಿ ಅಂಶಗಳಿಂದ ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 20 =
Remember me
