ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಪರಿಣಾಮ ನಗರದ ಹಲವೆಡೆ ಸುರಿಯುತ್ತಿರುವ ಮಳೆ ಶನಿವಾರವೂ ಮುಂದುವರಿದಿದೆ.
ಬೆಳಗ್ಗೆಯಿಂದ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಕೆಲವಡೆ ತುಂತುರು ಮಳೆ ಸುರಿದರೆ ಇನ್ನೂ ಕೆಲವೆಡೆ ಬಿರುಸಾಗಿ ವರ್ಷಧಾರೆಯಾಯಿತು. ಸಂಜೆ ಬಳಿಕ ಕೃಷ್ಣರಾಜೇಂದ್ರ ಮಾರುಕಟ್ಟೆ, ಮೆಜೆಸ್ಟಿಕ್​,ಲಾಲ್​ಬಾಗ್​, ವಿಧಾನಸೌಧ, ಜೆ.ಪಿ.ನಗರ, ಜಯನಗರ, ರಾಜಮಹಲ್​ ಗುಟ್ಟಹಳ್ಳಿ, ಯಶವಂತಪುರ, ಎಂ.ಜಿ.ರಸ್ತೆ, ಚಾಮರಾಜಪೇಟೆ ಸೇರಿ ನಗರದ ವಿವಿಧೆಡೆ ಮಳೆಯಾಯಿತು. ಮಳೆ ಕೊರತೆ ಅನುಭವಿಸುತ್ತಿದ್ದ ಉದ್ಯಾನನಗರಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿರುವುದು ಗಮನಾರ್ಹ. ವಾರದಿಂದ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ತಂಪಾದ ವಾತಾವರಣ ಕಂಡುಬಂದಿದ್ದು, ಉಷ್ಣಾಂಶ ಇಳಿಮುಖವಾಗಿದೆ.
ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಸಿಎಸ್​ಕೆ ಪಂದ್ಯ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ, ನಟ ಶಿವರಾಜ್​ಕುಮಾರ್
ಮೂರು ದಿನ ಬಿರುಸುಅರಬ್ಬಿ ಸಮುದ್ರ, ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯಲ್ಲಿ ನೈಋತ್ಯ ಮಾನ್ಸೂನ್​ (ಮುಂಗಾರು ಮಾರುತ) ರೂಪುಗೊಳ್ಳುವುದಕ್ಕೆ ಆಶಾದಾಯಕ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ನಗರದಲ್ಲಿ ಮೇ 19ರಿಂದ ಮೇ 21ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ.
ಎಲ್ಲೆಲ್ಲಿ ಎಷ್ಟು ಮಳೆ?ಪ್ರದೇಶ           ಮಿಮೀಮಾರಪ್ಪನಪಾಳ್ಯ   35ನಂದಿನಿಲೇಔಟ್​    25ನಾಗಪುರ           24ಪೀಣ್ಯ ಕೈಗಾರಿಕಾ ಪ್ರದೇಶ 17ರಾಜಾಜಿನಗರ          12ಕಾಟನ್​ಪೇಟೆ          12ಚಾಮರಾಜಪೇಟೆ      10
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − four =
Remember me
