ಬೆಂಗಳೂರು:ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
ಇದನ್ನೂ ಓದಿ:ನ್ಯಾಷನಲ್ ಹೆರಾಲ್ಡ್ ಪ್ರಕರಣ; 752 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಕೆಲವೇ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 6 =
Remember me
