ಬೆಂಗಳೂರು:ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಬಹುದು. ಮಿಂಚು ಮತ್ತು ಬಿರುಗಾಳಿ ಸಹಿತ ಗಂಟೆಗೆ 40-50ಕಿಮೀ ವೇಗದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಕೆಲವು ಕಡೆ ವಿದ್ಯುತ್ ಕಂಬ, ಮರಗಳು ಧರೆಗುರುಳುವ ಸಂಭವವಿದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಓಡಾಡುವಂತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿದೆ.
ವಾಡಿಕೆಯಂತೆ ಜೂ 1 ಅಥವಾ ಜೂ 2ರಂದು ಕೇರಳಕ್ಕೆ ಆಗಮಿಸಿದ್ದ ಮಾರುತಗಳು ಮೂರ‌್ನಾಲ್ಕು ದಿನಗಳ ಬಳಿಕ ಕರ್ನಾಟಕಕ್ಕೆ ಪ್ರವೇಶಿಸಬೇಕಿತ್ತು. ಆದರೆ, ಮುಂಗಾರು ಪೂರ್ವದಲ್ಲಿ ಉಂಟಾಗಿದ್ದ ತೇವಾಂಶ ಕೊರತೆ, ಗಾಳಿ ವೇಗ ಇಲ್ಲದಿರುವುದು ಹಾಗೂ ಮೋಕಾ ಚಂಡಮಾರುತವೂ ತೇವಾಂಶ ಭರಿತ ಮೋಡಗಳನ್ನು ಸೆಳೆತ ಸೇರಿ ಇತರೆ ಕಾರಣಗಳಿಂದ ವಾಡಿಕೆಯಂತೆ ಆಗಮನವಾಗಬೇಕಿದ್ದ ಮಾರುತಗಳು ಮೇಲೆ ಪರಿಣಾಮ ಬೀರಿದೆ. ಸೋಮವಾರ ಬಂಗಾಳಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮುಂಗಾರು ಸಂಬಂಧ ಪೂರಕ ಹವಾಗುಣ ಸೃಷ್ಠಿಯಾಗಿದೆ. ಈ ಹಿನ್ನೆಲೆಯಲ್ಲಿ ಜೂ 4 ಅಥವಾ 5ರಂದು ಕೇರಳಕ್ಕೆ ಮಾರುತಗಳು ಪ್ರವೇಶಿಸಲಿವೆ. ಒಂದು ವೇಳೆ ಮಾರುತಗಳು ಪ್ರಬಲವಾದರೆ ಒಂದೆರೆಡು ದಿನಗಳಲ್ಲಿ ಕರ್ನಾಟಕಕ್ಕೆ ಆಗಮಿಸಲಿದೆ.
ಇದನ್ನೂ ಓದಿ:ಉಡುಪಿ | ಉದ್ಯೋಗ ಸಿಗಲಿಲ್ಲವೆಂದು ಮನನೊಂದ ಯುವತಿ ಸಾವಿಗೆ ಶರಣು!
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಸೋಮವಾರ ಬೆಂಗಳೂರು ನಗರ, ರಾಮನಗರ, ಹಾವೇರಿ ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿದಿದೆ.
ಹಾಸನ,ಕೊಡಗು, ಚಿಕ್ಕಮಗಳೂರಿನಲ್ಲಿ ಮೇ 31ರಂದು, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ಜೂ 1ರಂದು ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರದಲ್ಲಿ ಮುಂದಿನ 3 ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ.
ಇತ್ತೀಚೆಗೆ ಕೆ.ಆರ್.ಸರ್ಕಲ್ ಬಳಿ ಮಳೆ ನೀರಿನಲ್ಲಿ ಕ್ಯಾಬ್ ಮುಳುಗಿ ಮಹಿಳಾ ಟೆಕ್ಕಿ ಭಾನುರೇಖಾ ಮೃತಪಟ್ಟ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ನಗರ ಸಂಚಾರ ಪೊಲೀಸರು ಬಿಬಿಎಂಪಿ ಅಥವಾ ಸ್ಥಳೀಯ ಸಂಸ್ಥೆಗಳಿಗಾಗಿ ಕಾಯದೆ, ತಾವೇ ತುರ್ತಾಗಿ ಸ್ಪಂದಿಸಲು ಅಗತ್ಯ ಸಲಕರಣೆಗಳನ್ನು ಖರೀದಿ ಮಾಡಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​​ ನಾಯಕರು ದೇಶಭಕ್ತಿಯನ್ನು ಆರ್​ಎಸ್​​ಎಸ್​​ನಿಂದ ಕಲಿಯಲಿ!
ಈಗಾಗಲೇ ಮಳೆಗಾಲ ಆರಂಭವಾಗಿದ್ದು, ನಗರದ ಕೆಲವಡೆ ಅದರಿಂದ ಹಾನಿ ಉಂಟಾಗಿದೆ. ರಸ್ತೆಯಲ್ಲಿ ನೀರು ಹೊಳೆಯಂತೆ ಹರಿದಿದೆ. ಹಲವೆಡೆ ಮರಗಳು ಹಾಗೂ ಮರದ ಟೊಂಗೆಗಳು ಬಿದ್ದಿವೆ. ಈ ಮಧ್ಯೆ ಜೂನ್‌ನಿಂದ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗಲಿದ್ದು, ಮತ್ತೊಮ್ಮೆ ನಗರವು ಭಾರಿ ಮಳೆಗೆ ಮುಳುಗುವ ಭೀತಿಯಲ್ಲಿದೆ. ಇದರಿಂದ ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳು ಉಂಟಾಗಲಿದೆ. ಹಾಗೆಯೇ ಮರದ ಕೊಂಬೆಗಳು ಬೀಳುವ ಸಾಧ್ಯತೆಯಿದೆ. ಅದರಿಂದ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ, ದಟ್ಟಣೆ ನಿಯಂತ್ರಿಸಲು ಹಾಗೂ ಮಳೆ ಹಾನಿಗೆ ಸ್ಪಂದಿಸಲು ಪೊಲೀಸರು ಅಗತ್ಯ ಸಲಕರಣೆ ಖರೀದಿಸಿದ್ದು, ಬಳಕೆ ಮಾಡಲು ಮುಂದಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 5 =
Remember me
