ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ ಮುಂದಿನ ನಾಲ್ಕು ಮುಂದುವರಿಯಲಿದೆ.
ಶಿವಮೊಗ್ಗದ ತೀರ್ಥಹಳ್ಳಿ 41 ಮಿಮೀ, ಚಿಕ್ಕಮಗಳೂರಿನ ಮುಗಳವಳ್ಳಿ 26 ಮಿಮೀ, ದಣ ಕನ್ನಡದ ಬೆಳ್ತಂಗಡಿ 26 ಮಿಮೀ, ಪುತ್ತೂರು 22 ಮಿಮೀ, ದಾವಣಗೆರೆಯ ಚನ್ನಗಿರಿ 22 ಮಿಮೀ, ಕೊಪ್ಪಳದ ಗಂಗಾವತಿ 19 ಮಿಮೀ ಸೇರಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಬುಧವಾರವೂ ವರುಣಾರ್ಭಟ ಜೋರಾಗಿತ್ತು ಎಂದು ವರುಣಾ ಮಿತ್ರ ವಿಜಯವಾಣಿಗೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಾಮರಾಜನಗರ ಮತ್ತು ಶಿವಮೊಗ್ಗದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಉತ್ತರ ಕನ್ನಡ, ಕಲಬುರಗಿ, ದಾವಣಗೆರೆಯಲ್ಲಿ ಮುಂದಿನ ಎರಡು ದಿನ, ಧಾರವಾಡ, ಬೆಳಗಾವಿ, ಹಾವೇರಿ, ವಿಜಯನಗರ, ಕೊಡಗಿನಲ್ಲಿ ಮೇ 16 ರಂದು ಯೆಲ್ಲೋ ಅರ್ಲಟ್​ ಇರಲಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.
ಪರಿಷತ್ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ
2-4 ಡಿ.ಸೆ.ಇಳಿಕೆ:ಮುಂದಿನ ಐದು ದಿನ ರಾಜ್ಯದ ಕೆಲ ಜಿಲ್ಲೆಗಲ್ಲಿ ಗರಿಷ್ಠ ತಾಪಮಾನದಲ್ಲಿ 2ರಿಂದ 4 ಡಿ.ಸೆ. ಉಷ್ಣಾಂಶ ಇಳಿಮುಖವಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿ.ಸೆ., 23 ಡಿ.ಸೆ. ಉಷ್ಣಾಂಶ ಇರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − six =
Remember me
