ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ವಿಕೃತ ಮನಸ್ಥಿತಿಯ ವೈದ್ಯನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಿಕಿತ್ಸೆಗೆ ಬರುತ್ತಿದ್ದ ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಿಸುತ್ತಿದ್ದ. ಅಷ್ಟೇ ಅಲ್ಲ, ಚಿಕಿತ್ಸೆ ಕೊಡುವ ನೆಪದಲ್ಲಿ ಬೇಕಂತಲೇ ಖಾಸಗಿ ಅಂಗಗಳಿಗೂ ಇಂಜೆಕ್ಷನ್​ ಕೊಡಲು ಮುಂದಾಗುತ್ತಿದ್ದ…
ವೈದ್ಯ ಡಾ.ವೆಂಕಟರಮಣ ಬಂಧಿತ. ಯಶವಂತಪುರದ ಮತ್ತಿಕೆರೆಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಈತ, ನ್ಯಾಚುರೋಪಥಿ ಮತ್ತು ಅಕ್ಯೂಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದ. ಚಿಕಿತ್ಸೆ ಕೊಡವ ನೆಪದಲ್ಲಿ ಮಹಿಳೆಯರ ಜತೆ ದುರ್ವತನೆ ತೋರುತ್ತಿದ್ದ. ಚಿಕಿತ್ಸೆ ಹೆಸರಲ್ಲಿ ರಹಸ್ಯವಾಗಿ ತನ್ನ ಮೊಬೈಲ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ. ಇದನ್ನು ಗಮನಿಸಿದ ಮಹಿಳೆಯರು ಪ್ರಶ್ನೆ ಮಾಡಿದರೆ ಚಿಕಿತ್ಸೆ ಕೊಡುವಾಗ ಕಾಯಿಲೆಯ ಮೂಲವನ್ನ ಹುಡುಕಬೇಕು. ಹಾಗಾಗಿ ವಿಡಿಯೋ ಮಾಡುತ್ತಿರುವುದಾಗಿ ಸಮಜಾಯಿಷಿ ಕೊಡುತ್ತಿದ್ದ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದರೆ ಚಿಕಿತ್ಸೆ ಬೇಕಾದರೆ ಪಡೆಯಿರಿ, ಇಲ್ಲವಾದರೆ ಹೊರಡಿ ಎನ್ನುತ್ತಿದ್ದ. ಅಷ್ಟೇ ಅಲ್ಲ, ಮಹಿಳೆಯರ ಬಟ್ಟೆ ಬಿಚ್ಚಿಸಿ ಚಿಕಿತ್ಸೆ ಕೊಡುವ ನೆಪದಲ್ಲಿ ಖಾಸಗಿ ಅಂಗಗಳನ್ನು ಮುಟ್ಟಿ ಆ ವೇಳೆ ವಿಡಿಯೋ ಮಾಡಿಕೊಂಡು ಲೈಂಗಿಕಿ ಕಿರುಕುಳ ನೀಡುತ್ತಿದ್ದ!
ಇತ್ತೀಚಿಗೆ ಯುವತಿಯೊಬ್ಬರು ಕಾಲು ನೋವಿಗೆ ಚಿಕಿತ್ಸೆ ಪಡೆಯಲು ಕ್ಲಿನಿಕ್​ಗೆ ತೆರಳಿದ್ದರು. ಆ ವೇಳೆ ಖಾಸಗಿ ಅಂಗಗಳಿಗೂ ಇಂಜೆಕ್ಷನ್ ನೀಡಲು ವೈದ್ಯ ಮುಂದಾಗಿದ್ದ. ಇದಾದ ಕೆಲ ದಿನಗಳ ಬಳಿಕ ಯುವತಿಯ ಮೊಬೈಲ್​ಗೆ ತಾನು ಚಿಕಿತ್ಸೆ ಪಡೆದ ವಿಡಿಯೋ ಬಂದಿತ್ತು. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಯುವತಿಯ ಕಡೆಯವರು ದೂರು ದಾಖಲಿಸಿದ್ದರು.
ಯಶವಂತಪುರ ಪೊಲೀಸರಿಂದ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. ಸಿಸಿಬಿ ಪೊಲೀಸರು ಡಾ.ವೆಂಕಟರಮಣರನ್ನ ವಶಕ್ಕೆ ಪಡೆದ ಅವರ ಮೊಬೈಲ್​ ಪರಿಶೀಲನೆ ನಡೆಸಿದಾಗ ಅದರಲ್ಲಿ ಇದೇ ರೀತಿಯ ಹತ್ತಾರು ವಿಡಿಯೋ ಪತ್ತೆಯಾಗಿದೆ. 14 ವಯಸ್ಸಿನಿಂದ ಹಿಡಿದು 45 ವಯಸ್ಸಿನ ಹೆಣ್ಣು ಮಕ್ಕಳ ವಿಡಿಯೋ ಅದರಲ್ಲಿತ್ತು. ಹಲವು ತಿಂಗಳಿಂದ ಇದೇ ರೀತಿಯ ಕೃತ್ಯ ಎಸಗಿರುವುದು ಗೊತ್ತಾಗಿದೆ. ಈ ಹಿನ್ನೆಲೆ ವೈದ್ಯನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಹುತ್ರಿದುರ್ಗ ಬೆಟ್ಟದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿಯ ಬಟ್ಟೆ ಬಿಚ್ಚಿ ಕಿರುಕುಳ, ಚಾರಣಿಗರಿಗೆ ಬೆದರಿಕೆ ಹಾಕಿ ದರೋಡೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
