ಬೆಂಗಳೂರು:ಯಶವಂತಪುರ ಮೇಲ್ಸೇತುವೆಯಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಬೆಂಗಾವಲು ವಾಹನವು ಅಪಘಾತಕ್ಕೀಡಾಗಿದ್ದು, ಈ ಅವಘಡದ ಬಳಿಕ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.
ಜನವರಿ 2ರಂದು ತುಮಕೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ನಡೆಯಲಿದೆ. ಹೀಗಾಗಿ ಸಿದ್ಧತೆ ವೀಕ್ಷಿಸಲು ಸಿಎಂ ಬಿಎಸ್​ವೈ ಇಂದು ಬೆಳಗ್ಗೆ ತುಮಕೂರಿಗೆ ತೆರಳಿದ್ದಾರೆ. ಈ ವೇಳೆ ಯಶವಂತಪುರ ಮೇಲ್ಸುತುವೆಯಲ್ಲಿ ಬಿಎಸ್​ವೈ ಬೆಂಗಾಲು ವಾಹನ(Ka 01 G 6661) ಅಪಘಾತಕ್ಕೀಡಾಗಿದ್ದು, ಇದರಿಂದ ಸ್ಥಳದಲ್ಲಿ ಸರಣಿ ಅಪಘಾತವೂ ಸಂಭವಿಸಿದೆ.
ಅತಿವೇಗದಿಂದ ಬಂದ‌ ಬೆಂಗಾವಲು ವಾಹನ ಆಯತಪ್ಪಿ ರಸ್ತೆ ವಿಭಜಕ ಏರಿ, ಪಕ್ಕದ‌ ರಸ್ತೆಗೆ ಎಗರಿ ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಕ್ಯಾಂಟರ್​ ದಿಢೀರ್​ ಬ್ರೇಕ್​ ಹಾಕುತ್ತಿದ್ದಂತೆ ಹಿಂಬದಿ ಆಟೋ ಕೂಡ ಡಿಕ್ಕಿಯಾಗಿದೆ.
ಘಟನೆಯಲ್ಲಿ ಕಾರು, ಲಾರಿ ಮತ್ತು ಆಟೋ ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ಮೂರು ವಾಹನ ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಳುಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಶವಂತಪುರ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಬಳಿಕ ವಾಹನ ತೆರವುಗೊಳಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
