ಬೆಂಗಳೂರು: “ಮುಂದಿನ 100 ದಿನಗಳ ಒಳಗಾಗಿ ಎತ್ತಿನಹೊಳೆ ಮೊದಲ ಹಂತದ ಯೋಜನೆಯಲ್ಲಿ ನೀರು ಪಂಪ್ ಮಾಡಿ ಹರಿಸಲಾಗುವುದು” ಎಂದು ಡಿಸಿಎಂ ಹಾಗೂ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಎತ್ತಿನಹೊಳೆ ಯೋಜನೆ ಸಂಬಂಧ ಹಾಸನ ಜಿಲ್ಲೆ ಸಕಲೇಶಪುರದ ಹೆಬ್ಬನಹಳ್ಳಿ ಪವರ್ ಸಬ್ ಸ್ಟೇಷನ್ ಮತ್ತು ದೊಡ್ಡನಾಗರ ಪಂಪ್ ಹೌಸ್ ಗೆ ಮಂಗಳವಾರ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.“ಪಶ್ಚಿಮ ಘಟ್ಟದಲ್ಲಿ ಹರಿಯುವ ನೀರಲ್ಲಿ ಕೋಲಾರದವರೆಗೆ ಒಟ್ಟು 24 ಟಿಎಂಸಿ ಹರಿಸುವುದು ಎತ್ತಿನಹೊಳೆ ಯೋಜನೆಯ ಉದ್ದೇಶ. ಈ ಹಿಂದೆ ಜಲ ಸಂಪನ್ಮೂಲ ಸಚಿವನಾಗಿದ್ದಾಗಲೂ ನಾನು ಇಲ್ಲಿಗೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದೆ. ಕೆಲಸ ಆಗ ಎಲ್ಲಿತ್ತೋ ಈಗಲೂ ಅಲ್ಲೇ ಇದೆ ಎಂದರು.ಈ ಯೋಜನೆ ವೆಚ್ಚ ಸದ್ಯಕ್ಕೆ 24 ಸಾವಿರ ಕೋಟಿ ರೂಗೆ ಏರಿಕೆ ಆಗಿದ್ದು, ಈ ಯೋಜನೆ ಪ್ರಗತಿ ಬಗ್ಗೆ ನನಗೆ ಸಮಾಧಾನ ಇಲ್ಲ. ಹೀಗಾಗಿ ನಾನೇ ಖುದ್ದಾಗಿ ಬಂದು ಪರಿಶೀಲನೆ ಮಾಡಿದ್ದೇನೆ. ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಅಧಿಕಾರಿಗಳು ಅವರದೇ ಆದ ಕಾನೂನು ಬಳಸುತ್ತಿರುವುದರಿಂದ ಯೋಜನೆಗೆ ತೊಡಕಾಗಿದೆ ಎಂಬ ದೂರುಗಳು ಬಂದಿವೆ ಎಂದು ಹೇಳಿದರು.ಈ ಯೋಜನೆಗೆ ಎದುರಾಗಿರುವ ಸಮಸ್ಯೆಗಳಿಗೆ ಒಂದೊಂದಾಗಿ ಪರಿಹಾರ ನೀಡಲಾಗಿದೆ. ವಿದ್ಯುತ್ ಇಲಾಖೆ ಸಮಸ್ಯೆ, ಅರಣ್ಯ ಇಲಾಖೆ ಸಮಸ್ಯೆ, ಭೂ ಮಾಲೀಕರ ಸಮಸ್ಯೆ ಸೇರಿದಂತೆ ಎಲ್ಲದ್ದಕ್ಕೂ ಪರಿಹಾರ ಸೂಚಿಸಲಾಗಿದೆ. ಈ ಯೋಜನೆ ಪೂರ್ಣಗೊಳಿಸಲು ಅಗತ್ಯ ಲೋಡ್ ಶೆಡ್ಡಿಂಗ್ ಗೆ ಸೂಚನೆ ನೀಡಲಾಗಿದೆ. ಅರಣ್ಯ ಪ್ರದೇಶ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಒಪ್ಪಿದ್ದಾರೆ.ಕಂದಾಯ ಭೂಮಿ ಸ್ವಾಧೀನ ಸಮಸ್ಯೆ ನಿವಾರಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲರ ಆಶ್ವಾಸನೆ ಮೇರೆಗೆ 100 ದಿನಗಳಲ್ಲಿ ಮೊದಲ ಹಂತದ ಯೋಜನೆಯ ನೀರನ್ನು ಪಂಪ್ ಮಾಡಲು ಕಾಲ ಮಿತಿ ನಿಗದಿ ಮಾಡಿದ್ದೇವೆ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × five =
Remember me
