ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ, ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಈ ಯೋಗ ದಿನದ ಆಚರಣೆಯ ಮಹತ್ವ ಮತ್ತು ಇತಿಹಾಸದ ಬಗ್ಗೆ ಇಂದು ತಿಳಿದುಕೊಳ್ಳೋಣ…
ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್‌ 21 ರಂದು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತದೆ. ಋಷಿ ಮುನಿಗಳಿಂದ ಆರಂಭವಾಗಿ ಇಂದಿನವರೆಗೆ ನಾನಾ ಮಾರ್ಪಟುಗಳೊಂದಿಗೆ ಯೋಗ ಅನೇಕರ ಜೀವನದ ಅವಿಭಾಜ್ಯ ಅಂಗವಾಗಿದೆ. ಈ ವರ್ಷ ಒಂಬತ್ತನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ.
ಯೋಗ ದಿನಾ ಆಚರಣೆಗೆ ಬಂದಿದ್ದು ಹೇಗೆ?:
ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮೊದಲ ಬಾರಿಗೆ ಯೋಗಾಭ್ಯಾಸವನ್ನು ಮುನ್ನಡೆಸಲಿದ್ದಾರೆ. ಈ ಬಾರಿ ಜಗತ್ತಿನಾದ್ಯಂತ 25 ಕೋಟಿ ಜನರು ಯೋಗಾಭ್ಯಾಸದಲ್ಲಿ ಭಾಗಿಯಾಗುತ್ತಾರೆ. 180 ದೇಶಗಳ ಗಣ್ಯರು ಯೋಗಾಭ್ಯಾಸ ಮಾಡಲಿದ್ದಾರೆ. ಈ ವರ್ಷದ ಯೋಗ ಥೀಮ್​ “ವಸುಧೈವ ಕುಟುಂಬಕಂ”.

ಯೋಗ ದಿನಾಚರಣೆಯ ಇತಿಹಾಸ:2014ರ ಸೆಪ್ಟೆಂಬರ್‌ 27ರಂದು ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾಡಿದ ಭಾಷಣದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಯೋಗ ದಿನಾಚರಣೆಗೆ ಸಂಬಂಧಿಸಿದ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಮೋದಿಯವರ ಈ ಪ್ರಸ್ತಾವನೆಯು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಂದ ಅಗಾಧ ಬೆಂಬಲವನ್ನು ಪಡೆಯಿತು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು. 2014 ಡಿಸೆಂಬರ್‌ 11ರಂದು ಈ ನಿರ್ಣಯವನ್ನು ಅಂಗೀಕರಿಸಲಾಯಿತು. 2015ರ ಜೂನ್‌ 21 ರಂದು ಮೊದಲ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗಿತ್ತು.
ಇದನ್ನೂ ಓದಿ:WORLD BLOOD DONOR DAY: ರಕ್ತದಾನದ ಮೂಲಕ ಜೀವದಾನ ಮಾಡಿ..
ಯೋಗ ದಿನಾಚರಣೆಯ ಉದ್ದೇಶ:ಅಂತರಾಷ್ಟ್ರೀಯ ಯೋಗ ದಿನವು ಯೋಗಾಭ್ಯಾಸದ ಹಲವಾರು ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರಪಂಚದಾದ್ಯಂತ ಜನರನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇದೀಗ ಪ್ರತಿವರ್ಷ ಜೂನ್‌ 21 ರಂದು ವಿಶ್ವದಾದ್ಯಂತ ಯೋಗದಿನಾಚರಣೆಯನ್ನು ಪ್ರತಿವರ್ಷ ಆಚರಣೆ ಮಾಡಲಾಗುತ್ತದೆ.
ಆಚರಣೆ :ಈ ದಿನದಂದು ವಿಶ್ವಾದ್ಯಂತ ವಿವಿಧ ಕಾರ್ಯಕ್ರಮಗಳು, ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತದೆ. ಎಲ್ಲಾ ವಯಸ್ಸಿನ ಹಾಗೂ ಫಿಟ್‌ನೆಸ್‌ ಕಾಯ್ದುಕೊಳ್ಳುವ ಜನರು ಯೋಗ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೆ.
ಯೋಗ ದಿನಾಚರಣೆಯ ಮಹತ್ವ:ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ. ಇದು ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ.
ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೆ ಪ್ರಕೃತಿ ಮತ್ತು ಮನುಷ್ಯನ ನಡೆವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ.
ಆರೋಗ್ಯವರ್ಧನೆಗೆ ಕಡಕ್ನಾಥ್ ಕೋಳಿ; ಕಪ್ಪು ಕೋಳಿ ಮಾಂಸ ತಿಂದ್ರೆ ರೋಗಗಳಿಂದ ಸಿಗುತ್ತೆ ಮುಕ್ತಿ

ಜಿಮ್​ಗೆ ಹೋಗುವ ಸಸ್ಯಾಹಾರಿಗಳು ವಿಟಮಿನ್​ಗಾಗಿ ಈ 5 ಪ್ರೋಟೀನ್ ಭರಿತ ಆಹಾರ ಸೇವಿಸಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
