ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ:ನಟಿಯರ ಹಸಿರು ಪ್ರೀತಿ: ಹಿತ್ತಲು, ತಾರಸಿಯಲ್ಲಿ ಫಲ-ಪುಷ್ಪಗಳ ಘಮ
ಬೆಂಗಳೂರಿನ ಏರ್​ಪೋರ್ಟ್ ರಸ್ತೆಯಲ್ಲಿರುವ ಸಿಬಿಐ ಕಚೇರಿಯಲ್ಲಿ ಮಂಗಳವಾರ ಮಲ್ಲಿಕಾರ್ಜುನ್ ವಿಚಾರಣೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಸಿಬಿಐ ಕಲೆ ಹಾಕಿದೆ. ಹತ್ಯೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂಬುದಾಗಿ ಈ ಹಿಂದೆ ಸಿಬಿಐ ಹೇಳಿತ್ತು. ಇದಾದ ಬಳಿಕ ಪ್ರಕರಣದಲ್ಲಿ ನಿಜವಾಗಿಯೂ ಭಾಗಿಯಾಗಿದ್ದಾರೆ ಎನ್ನಲಾದ 8 ಮಂದಿಯನ್ನು ಬಂಧಿಸಲಾಗಿತ್ತು. ಅಮಾಯಕರನ್ನು ಬಂಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಲ್ಲಿಕಾರ್ಜುನ್ ಬಳಿ ಪ್ರಶ್ನೆಗಳನ್ನು ಕೇಳಿದ್ದಾರೆ. ಕೊಲೆ ಹಿಂದೆ ಯಾವುದಾದರೂ ರಾಜಕಾರಣಿಗಳ ಹಸ್ತಕ್ಷೇಪವಿದೆಯೇ ಎಂಬ ಬಗ್ಗೆಯೂ ವಿಚಾರಿಸಿದ್ದಾರೆ ಎನ್ನಲಾಗುತ್ತಿದೆ. ರಾಜಕಾರಣಿಗಳ ಕೈವಾಡವಿದೆ ಎಂಬ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಎಎಸ್ಪಿ ಉತ್ತರಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ ಹೋರಾಟ ನಡೆಸುವ ಎಚ್ಚರಿಕೆ
ಡಿಸಿಪಿಯಾಗಿದ್ದ ಮಲ್ಲಿಕಾರ್ಜುನ್:ಕೊಲೆ ನಡೆದ ಅವಧಿಯಲ್ಲಿ ಮಲ್ಲಿಕಾರ್ಜುನ್ ಹುಬ್ಬಳ್ಳಿ- ಧಾರವಾಡ ಕಮಿಷನರೇಟ್​ನಲ್ಲಿ ಡಿಸಿಪಿ ಆಗಿ ಕಾರ್ಯ ನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ಜಾರಿಗೊಳಿಸಿತ್ತು. ಅದರಂತೆ ಅವರು ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಅವರು ನೀಡಿದ ಹೇಳಿಕೆಯಲ್ಲಿರುವ ಮಹತ್ವದ ಅಂಶಗಳ ಆಧಾರದ ಮೇಲೆ ಸಿಬಿಐ ತನಿಖೆ ಮುಂದುವರಿಸಲಿದೆ. ಕೆಲ ಪೊಲೀಸರು ಮತ್ತು ಧಾರವಾಡದ ಕೆಲ ಖಾಸಗಿ ವ್ಯಕ್ತಿಗಳಿಗೂ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ಜಾರಿಗೊಳಿಸಲಾಗಿದೆ. ಸದ್ಯದಲ್ಲೇ ಅವರ ವಿಚಾರಣೆಯೂ ನಡೆಯಲಿದೆ ಎಂದು ಸಿಬಿಐ ಮೂಲಗಳಿಂದ ತಿಳಿದು ಬಂದಿದೆ. ಪ್ರಕರಣ ಸಂಬಂಧ ಎಂಟು ಮಂದಿ ಆರೋಪಿಗಳ ವಿರುದ್ಧ ಇತ್ತೀಗಷ್ಟೇ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಶಾಮೀಲಾಗಿರುವ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದೀಗ ಸಿಬಿಐ ತನಿಖೆ ಚುರುಕುಗೊಳಿಸಿದೆ.
ಇದನ್ನೂ ಓದಿ:ತಳವಾರ, ಪರಿವಾರಕ್ಕೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಿ
ರಾಜಕಾರಣಿಗಳ ಬಗ್ಗೆ ಅನುಮಾನ:ಕೊಲೆಯ ಹಿಂದೆ ಪೊಲೀಸರು ಹಾಗೂ ಸ್ಥಳೀಯ ರಾಜಕಾರಣಿಗಳು ಶಾಮೀಲಾಗಿರುವ ಬಗ್ಗೆ ಸಿಬಿಐಗೆ ಅನುಮಾನ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲು ಮುಂದಾಗಿದೆ. ಕೆಲ ಮಹತ್ವದ ಸಾಕ್ಷ್ಯಗಳು ಈಗಾಗಲೇ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿದೆ ಎನ್ನಲಾಗಿದೆ. 2016ರ ಜೂನ್15ರಂದು ಧಾರವಾಡದ ಸಪ್ತಾಪುರದ ಜಿಮ್ಲ್ಲಿ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದ ಯೋಗಿಶ್ ಗೌಡ ಕೊಲೆ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ 2019 ಸೆಪ್ಟೆಂಬರ್​ನಲ್ಲಿ ಸಿಬಿಐಗೆ ವರ್ಗಾವಣೆ ಮಾಡಿತ್ತು.
ಸತ್ತವ ಎದ್ದು ಬಂದ; ಮತ್ತೆ ಸತ್ತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 18 =
Remember me
