ಧಾರವಾಡ:ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಶಾಸಕ ವಿನಯ್​ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಮಂಗಳವಾರ ಮಧ್ಯಾಹ್ನ ಅನುಮತಿ ನೀಡಿದೆ.
ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ವಿರುದ್ಧದ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಇಲ್ಲ: ಸಿಎಂ ಸಿದ್ದರಾಮಯ್ಯ
ವಿನಯ್ ಕುಲಕರ್ಣಿ ಅವರು ನೇರವಾಗಿ ಮತದಾನ ಕೇಂದ್ರಕ್ಕೆ ಹೋಗಿ ಮತ ಚಲಾಯಿಸಿ ನಂತರ ನೇರವಾಗಿ ಧಾರವಾಡ ಜಿಲ್ಲೆ ಬಿಟ್ಟು ಹೋಗಬೇಕು ಎಂದು ನ್ಯಾಯಮೂರ್ತಿ ಎಂ.ಜಿ. ಉಮಾ ನಿರ್ದೇಶಿಸಿದ್ದಾರೆ.
ಮತದಾನಕ್ಕೆ ಅವಕಾಶ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು.
ಇದೀಗ ವಿನಯ್ ಕುಲಕರ್ಣಿ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ಮತದಾನಕ್ಕೆ ಅವಕಾಶ ನೀಡಿದೆ. ಶಿಗ್ಗಾಂವಿ, ಹುಬ್ಬಳ್ಳಿ ಮಾರ್ಗವಾಗಿ ವಿನಯ ಕುಲಕರ್ಣಿ ಸಂಜೆ 4.30ರ ಸುಮಾರಿಗೆ ಧಾರವಾಡದ ಶಾರದಾ ಹೈಸ್ಕೂಲ್ ಮತಗಟ್ಟೆಗೆ ಆಗಮಿಸುವ ನಿರೀಕ್ಷೆ ಇದೆ.
ಪ್ರಜ್ವಲ್‌ ರೇವಣ್ಣ ಬಗ್ಗೆ ಸಹನೆ ತೋರಬೇಕಾಗಿಲ್ಲ: ಕಾಂಗ್ರೆಸ್‌ನ ನಡೆಯನ್ನು ಪ್ರಶ್ನಿಸಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + twenty =
Remember me
