ಹುಬ್ಬಳ್ಳಿ:ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಬೆಳ್ಳಂಬೆಳಗ್ಗೆಯೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದರು. ಇದೇ ರೀತಿ ಶಾಕ್​ ಅನ್ನು ಅವರ ಸಹೋದರ ವಿಜಯ್ ಕುಲಕರ್ಣಿ ಅವರಿಗೂ ನೀಡಿದ್ದು, ಹುಬ್ಬಳ್ಳಿಯ ಪ್ರಗತಿ ಕಾಲನಿಯಲ್ಲಿರುವ ವಿಜಯ್ ಮನೆಗೆ ತೆರಳಿ ಅವರನ್ನೂ ವಶಕ್ಕೆ ತೆಗೆದುಕೊಂಡು ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.
ಅಲ್ಲಿ ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ಮುಂದುವರಿಸಿದ್ದಾರೆ. ವಿಜಯ್ ಕುಲಕರ್ಣಿ ಅವರನ್ನು ಕರೆದೊಯ್ಯುವಾಗ ಶರ್ಟ್​ ಬದಲಾಯಿಸಿ ಬರುವುದಾಗಿ ಮನವಿ ಮಾಡಿಕೊಂಡರು. ಅದಕ್ಕೆ ಅವಕಾಶ ನೀಡಿದ ಅಧಿಕಾರಿಗಳು, ಬಳಿಕ ಅವರನ್ನು ಕರೆದೊಯ್ದಿದ್ದಾರೆ.
‘ಇದನ್ನೂ ಓದಿ:ಯೋಗೀಶ್ ಗೌಡ ಕೊಲೆ ಪ್ರಕರಣ: ಹಾವೇರಿ ಎಎಸ್ಪಿ ಮಲ್ಲಿಕಾರ್ಜುನ್ ವಿಚಾರಣೆ
ಇದೇ ವೇಳೆ, ಕುಲಕರ್ಣಿ ಸಹೋದರರನ್ನು ಬಂಧಿಸಿರುವ ವಿಚಾರ ಬಹಿರಂಗವಾಗುತ್ತಿದ್ದಂತೆ ಉಪನಗರ ಪೊಲೀಸ್ ಠಾಣೆ ಎದುರು ಅವರ ಬೆಂಬಲಿಗರು ಬಂದು ಸೇರಿದ್ದಾರೆ. ಧಾರವಾಡ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಅವರ ಬೆಂಬಲಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಠಾಣೆ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಯೋಗೇಶ್ ಗೌಡ ಕೊಲೆ ಕೇಸ್: ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 1 =
Remember me
