ಧಾರವಾಡ:ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್​​​ ಮಾಜಿ ಸಚಿವ ವಿನಯ​ ಕುಲಕರ್ಣಿಗೆ ಸುಪ್ರೀಂಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದ್ದು, ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದಕ್ಕೆ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಅಲ್ಲಿ ಆರೋಪಿ, ಮಾಜಿ ಸಚಿವ ಕುಲಕರ್ಣಿಗೆ ಜಾಮೀನು ಸಿಕ್ಕಿದೆ. ಆದರೆ ಹಿಂಡಲಗಾ ಜೈಲು ಅಧಿಕಾರಿಗಳಿಗೆ ಜಾಮೀನು ಆದೇಶ ಪ್ರತಿ ಮಾತ್ರ ಇನ್ನೂ ಬಂದಿಲ್ಲ.
ಇ-ಮೇಲ್ ಮೂಲಕ ಆದೇಶ ಪ್ರತಿ ಬಂದರೆ, ನಾಳೆ ಬೆಳಗ್ಗೆ 10 ಗಂಟೆಯ ನಂತರ ಹಿಂಡಲಗಾ ಕಾರಾಗೃಹದಿಂದ ವಿನಯ ಕುಲಕರ್ಣಿ ಬಿಡುಗಡೆ ಪ್ರಕ್ರಿಯೆ ನಡೆಯಲಿದೆ.
ಪ್ರಕರಣದ ಹಿನ್ನೆಲೆ:
2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಉದಯ್ ಜಿಮ್ ಬಳಿ ಯೋಗೇಶ್ ಗೌಡರನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ‌ ಕೊಲೆ ಮಾಡಿತ್ತು. ಪ್ರಕರಣದ ಗಂಭೀರತೆ ಅರಿತ ಸರ್ಕಾರ‌ 2019ರಲ್ಲಿ ಈ ಕೇಸನ್ನು ಸಿಬಿಐಗೆ ವರ್ಗಾಯಿಸಿತ್ತು.
ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಸುಮಾರು ಒಂಬತ್ತು ತಿಂಗಳಿನಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದಲೂ ವಿನಯ ಕುಲಕರ್ಣಿಗೆ ಜಾಮೀನು ದೊರೆತಿದ್ದು, ಷರತ್ತುಬದ್ಧ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ.
ಸಿಎಂ ಮೇಲಿನ ಅಭಿಮಾನಕ್ಕಾಗಿ ದೇವಸ್ಥಾನವನ್ನೇ ನಿರ್ಮಿಸಿದ ಆಂಧ್ರ ಶಾಸಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
