ಧಾರವಾಡ:ಇಲ್ಲಿನ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್​ಗೌಡರ ಕೊಲೆ ಕೇಸ್​ನಲ್ಲಿ ಈಗಾಗಲೇ ಮಾಜಿ ಸಚಿವ ವಿನಯ್​ ಕುಲಕರ್ಣಿ ಸೇರಿದ್ದಾರೆ. ಇದೀಗ ಇವರ ಸೋದರ ಮಾವ ಚಂದ್ರಶೇಖರ ಇಂಡಿ ಜೈಲು ಪಾಲಾಗಿದ್ದಾರೆ.
ಯೋಗೀಶ್​ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಜಯಪುರದಲ್ಲಿ ಸಿಬಿಐ ಪೊಲೀಸರ ಚಂದ್ರಶೇಖರ ಇಂಡಿಯನ್ನ ಬಂಧಿಸಿ ಧಾರವಾಡಕ್ಕೆ ಕರೆತಂದಿದ್ದರು.
ಯೋಗೀಶ್​ಗೌಡರ ಹತ್ಯೆಗೆ ಶಸ್ತ್ರಾಸ್ತ್ರ ಪೂರೈಸಿದ ಆರೋಪ ಚಂದ್ರಶೇಖರ ಇಂಡಿ ಮೇಲಿದೆ. ಈ ಸಂಬಂಧ ಇವರನ್ನು 5-6 ಬಾರಿ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಅಕ್ರಮ ಶಸ್ತ್ರಾಸ್ತ್ರವನ್ನು ಭೀಮಾ ತೀರದಿಂದ ಸಂಗ್ರಹಿಸಲಾಗಿತ್ತು ಎಂದು ತಿಳಿದುಬಂದಿದೆ.
ಸೋಮವಾರ ವಿಚಾರಣೆ ನಡೆಸಿದ ಧಾರವಾಡ ಸಿಬಿಐ ವಿಶೇಷ ನ್ಯಾಯಾಲಯ, ಚಂದ್ರಶೇಖರ ಇಂಡಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಹೆಚ್ಚಿನ ವಿಚಾರಣೆಗಾಗಿ ಎರಡು ದಿನ ಸಿಬಿಐ ಕಸ್ಟಡಿಗೆ ನೀಡುವಂತೆ ಅಧಿಕಾರಿಗಳು ಕೋರಿದ್ದು, ಈ ಸಂಬಂಧ ನಾಳೆಗೆ(ಮಂಗಳವಾರ) ತೀರ್ಪುನ್ಯಾಯಾಧೀಶರು ಕಾಯ್ದಿರಿಸಿದ್ದಾರೆ.
ಸಿಬಿಐ ಪೊಲೀಸರಿಂದ ನ.5ರಂದು ಬಂಧನಕ್ಕೊಳಪಟ್ಟಿದ್ದ ವಿನಯ್​ ಕುಲಕರ್ಣಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. 2016ರ ಜೂನ್ 15ರಲ್ಲಿ ತನ್ನದೇ ಮಾಲೀಕತ್ವದ ಉದಯ್ ಜಿಮ್​ನಲ್ಲಿ ಯೋಗೀಶ್​ ಗೌಡ ಬರ್ಬರವಾಗಿ ಹತ್ಯೆಯಾಗಿದ್ದರು. ಈ ಸಂಬಂಧ ಸಿಬಿಐ ವಿಚಾರಣೆ ತೀವ್ರಗೊಳಿಸಿದೆ.
ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಮೊದಲ ಆರೋಪಿ ಕೊಲೆಗೆ ಸಿದ್ಧವಾಗಿತ್ತೆ ಸ್ಕೆಚ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 18 =
Remember me
