ಧಾರವಾಡ:ಇಲ್ಲಿನ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆ ಕೇಸ್​ನಲ್ಲಿ ಸಿಬಿಐ ಪೊಲೀಸರಿಂದ ಬಂಧನಕ್ಕೊಳಪಟ್ಟು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ.
ನ.5ರಂದು ಬಂಧನಕ್ಕೊಳಪಟ್ಟಿದ್ದ ವಿನಯ್​ ಕುಲಕರ್ಣಿಗೆ ಜಿಲ್ಲಾ ನ್ಯಾಯಾಲಯ ನ.9ರಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇಂದು(ನ.23) ನ್ಯಾಯಾಂಗ ಬಂಧನದ ಮೊದಲ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಧಾರವಾಡ 3ನೇ‌ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆದಿದ್ದು, ಮಾಜಿ ಸಚಿವರಿಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್​ ಆದೇಶಿಸಿದೆ. ಡಿ.7ರವರೆಗೆ ವಿನಯ್​ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲೇ ಇರಬೇಕಿದೆ.
2016ರ ಜೂನ್ 15ರಲ್ಲಿ ತನ್ನದೇ ಮಾಲೀಕತ್ವದ ಉದಯ್ ಜಿಮ್​ನಲ್ಲಿ ಯೋಗೀಶ್​ ಗೌಡ ಬರ್ಬರವಾಗಿ ಹತ್ಯೆಯಾಗಿದ್ದರು. ಈ ಸಂಬಂಧ ಸಿಬಿಐ ವಿಚಾರಣೆ ಕೈಗೆತ್ತಿಕೊಂಡಿದೆ. ಕೊಲೆ ಕೇಸ್​ನಲ್ಲಿ ವಿನಯ್​ ಕುಲಕರ್ಣಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪ ಇದೆ.
ಯೋಗೀಶ್​ಗೌಡ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ವಿನಯ್​ ಕುಲಕರ್ಣಿ ರಹಸ್ಯ ಇಲ್ಲಿದೆ

https://www.vijayavani.net/matrimonial-groom-robbery/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 9 =
Remember me
