ಹುಬ್ಬಳ್ಳಿ:ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​ ಗೌಡರ ಕೊಲೆ ಕೇಸ್​ನಲ್ಲಿ ಮಾಜಿ ಸಚಿವ ವಿನಯ್​ ಕುಲಕರ್ಣಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಆದರೆ ಈ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕೈವಾಡವಿದೆ ಎಂದು ವಿನಯ್​ ಕುಲಕರ್ಣಿ ಸಹೋದರ ವಿಜಯ್​ ಕುಲಕರ್ಣಿ ಗಂಭೀರ ಆರೋಪ ಮಾಡಿದ್ದಾರೆ.
ಶುಕ್ರವಾರ ಸಿಬಿಐ ವಿಚಾರಣೆಗೆ ತೆರಳುವ ಮುನ್ನ ಇಲ್ಲಿಯ ಪ್ರಗತಿ ಕಾಲನಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್​ ಕುಲಕರ್ಣಿ, ವೀರಶೈವ ಲಿಂಗಾಯತ ಸಮಾಜದಲ್ಲಿ ಪ್ರಮುಖ ಮುಖಂಡರಾಗಿ ಬೆಳೆಯುತ್ತಿರುವುದನ್ನು ನೋಡಿ ನಮ್ಮನ್ನು ತುಳಿಯಲು ಪ್ರಯತ್ನ ನಡೆದಿದೆ. ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ನಮ್ಮ ಕುಟುಂಬ ರಾಜಕಾರಣಕ್ಕೆ ಇವತ್ತು ಬಂದದ್ದಲ್ಲ. ನಮ್ಮ ಅಜ್ಜ, ಮುತ್ತಜ್ಜನ ಕಾಲದಿಂದಲೂ ರಾಜಕೀಯದಲ್ಲಿದ್ದೇವೆ. ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ. ಕಾನೂನು ಹೋರಾಟಕ್ಕೆ ಸಿದ್ಧವಾಗಿದ್ದೇವೆ. ಕಾನೂನು ಸಲಹೆ ಪಡೆದು ಹೋರಾಟ ಮುಂದುವರಿಸುತ್ತೇವೆ ಎಂದು ವಿಜಯ್​ ಕುಲಕರ್ಣಿ ಹೇಳಿದರು.
ವಿನಯ್​ ಕುಲಕರ್ಣಿ ಬಿಜೆಪಿ ಸೇರುವುದು ಸತ್ಯಕ್ಕೆ ದೂರವಾದ ಮಾತು. ಈ ಬಗ್ಗೆ ಯಾವುದೇ ಮಾತುಕತೆ ಆಗಿಲ್ಲ. ಅದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದರು.
ಆರ್​ ಆರ್​ ನಗರದಲ್ಲಿ ಜೆಡಿಎಸ್​ ಗೆಲ್ಲೋದಿಲ್ಲ ಎಂದ ಎಚ್​ಡಿಕೆ!

ಗಂಡನ ಆಟೋದಲ್ಲಿ ಸುತ್ತುತ್ತಾಳೆ, ಕ್ಷಣಾರ್ಧದಲ್ಲಿ ಲಕ್ಷ-ಲಕ್ಷ ಹಣ ತರ್ತಾಳೆ! ಬೆಚ್ಚಿಬೀಳಿಸುತ್ತೆ ಈ ದಂಪತಿಯ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
