ಧಾರವಾಡ:ಇಲ್ಲಿನ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಪೊಲೀಸ್​ ಇನ್​ಸ್ಪೆಕ್ಟರ್​ ಚನ್ನಕೇಶವ ಟಿಂಗರೀಕರ್​ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಯೋಗೀಶ್​ಗೌಡ ಕೊಲೆಯಾದ ಸಂದರ್ಭದಲ್ಲಿ ಚನ್ನಕೇಶವ ಟಿಂಗರೀಕರ್​ ಇಲ್ಲಿನ ಉಪನಗರ ಠಾಣೆಯ ಇನ್​ಸ್ಪೆಕ್ಟರ್​ ಆಗಿದ್ದರು. ಈ ಕೇಸ್​ನ ಸಾಕ್ಷ್ಯನಾಶ ಪಡಿಸಿದ ಆರೋಪ ಎದುರಿಸುತ್ತಿರುವ ಟಿಂಗರೀಕರ್​ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್​ ಜಾರಿ ಮಾಡಿತ್ತು. ಸದ್ಯ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಕಮೀಷನರೇಟ್​ನಲ್ಲಿ ಇನ್​ಸ್ಪೆಕ್ಟರ್​ ಆಗಿರುವ ಟಿಂಗರೀಕರ್​, ಹಲವು ದಿನಗಳಿಂದ ವೈದ್ಯಕೀಯ ರಜೆ ಮೇಲಿದ್ದಾರೆ. ಸಿಬಿಐ ಬಂಧನ ಭೀತಿಯಿಂದ ಕೆಲ ದಿನ ನಾಪತ್ತೆ ಆಗಿದ್ದರು. ಜಿಲ್ಲಾ 3ನೇ ಹೆಚ್ಚುವರಿ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಈ ಹಿಂದೆ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಹೀಗಾಗಿ ನ.9ರಂದು ಹೈಕೋರ್ಟ್​ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ವೇಳೆ ಸಿಬಿಐ ಪರ ವಕೀಲ ಸುದರ್ಶನ್​, ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಿದರು. ಟಿಂಗರೀಕರ್​ ಅವರು ಯೋಗೀಶ್ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿ ಆಗಿದ್ದರು. ಹೀಗಾಗಿ ಅವರನ್ನು ವಿಚಾರಣೆ ನಡೆಸಬೇಕಿದೆ. ಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಕೋರ್ಟ್​ಗೆ ಮನವಿ ಮಾಡಿದರು.
ಸಿಬಿಐ ವಿಚಾರಣೆಗೆ ಸಹಕಾರ ನೀಡಲಿದ್ದಾರೆ. ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಟಿಂಗರೀಕರ್​ ಪರ ವಕೀಲರು ಕೋರ್ಟ್​ಗೆ ಮನವಿ ಮಾಡಿದರು.
ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್​ ನ್ಯಾಯಾಧೀಶರು ಸೋಮವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದರು.
ಯೋಗೀಶ್​ಗೌಡ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ವಿನಯ್​ ಕುಲಕರ್ಣಿ ರಹಸ್ಯ ಇಲ್ಲಿದೆ

ಯಾರೂ ಇಲ್ಲದ ವೇಳೆ ಮನೆಗೆ ಎಂಟ್ರಿ ಕೊಡುತ್ತಿದ್ದಳು, ಈಕೆಯ ಕೃತ್ಯಕ್ಕೆ ಸ್ಥಳೀಯರೇ ಬೆಚ್ಚಿಬಿದ್ದಿದ್ದರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − eighteen =
Remember me
