ಧಾರವಾಡ:ಮಾಜಿ ಸಚಿವ ವಿನಯ್​ ಕುಲಕರ್ಣಿ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ.
ಜಿಪಂ ಸದಸ್ಯ ಯೋಗೀಶ್​ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಂಜೆ ವಿಜಯಪುರದಲ್ಲಿ ಸಿಬಿಐ ಪೊಲೀಸರು ಚಂದ್ರಶೇಖರ ಇಂಡಿಯನ್ನ ವಶಕ್ಕೆ ಪಡೆದಿದ್ದರು. ಭಾನುವಾರ ಧಾರವಾಡಕ್ಕೆ ಕರೆತಂದಿದ್ದಾರೆ. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಧೀಶರ ಗೃಹ ಕಚೇರಿಗೆ ಹಾಜರುಪಡಿಸಿದರು.
ಯೋಗೀಶ್​ಗೌಡರ ಹತ್ಯೆಗೆ ಶಸ್ತ್ರಾಸ್ತ್ರ ಪೂರೈಸಿದ ಆರೋಪ ಇವರ ಮೇಲಿದೆ ಎನ್ನಲಾಗಿದ್ದು, ಈ ಸಂಬಂಧ ಇವರನ್ನು 5-6 ಬಾರಿ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಅಕ್ರಮ ಶಸ್ತ್ರಾಸ್ತ್ರವನ್ನು ಭೀಮಾ ತೀರದಿಂದ ಸಂಗ್ರಹಿಸಲಾಗಿತ್ತು ಎಂದು ತಿಳಿದುಬಂದಿದೆ. ಸಿಬಿಐ ಪೊಲೀಸರಿಂದ ನ.5ರಂದು ಬಂಧನಕ್ಕೊಳಪಟ್ಟಿದ್ದ ವಿನಯ್​ ಕುಲಕರ್ಣಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
https://www.vijayavani.net/love-case-suicide/
ಸರ್ಕಾರಕ್ಕೆ ಸೆಡ್ಡು ಹೊಡೆದ ಸಾರಿಗೆ ಸಿಬ್ಬಂದಿ: ಮತ್ತೆ ಬಸ್​ ಬಂದ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 16 =
Remember me
