ಕೋಲಾರ:ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಅಮೂಲ್ಯ ಬಗ್ಗೆ ಬಿಜೆಪಿ ಸಂಸದ ಮುನಿಸ್ವಾಮಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.
ಕೋಲಾರದಲ್ಲಿ ಮಾತನಾಡಿರುವ ಸಂಸದ ಮುನಿಸ್ವಾಮಿ, “ಸಿಎಎ ವಿರೋಧಿಸಿ ಹೋರಾಡುತ್ತಿರುವವರಿಗೆ ಪಾಕಿಸ್ತಾನದ ಕುಮ್ಮಕ್ಕಿದೆ ಎಂದು ಹೇಳಲಾಗುತ್ತಿದೆ. ಆದರೆ ಹೋರಾಟದಲ್ಲಿ ಪಾಕಿಸ್ತಾನದ ಪರ ಜೈಕಾರ ಹಾಕಿರೋದನ್ನ ನೋಡಿದರೆ ಇವರು ಪಾಕಿಸ್ತಾನಿ ಏಜೆಂಟರುಗಳನ್ನು ಮೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ ಎನಿಸುತ್ತದೆ.” ಎಂದು ಹೇಳಿದ್ದಾರೆ.
ನಮ್ಮ ದೇಶದಲ್ಲಿ ಹುಟ್ಟಿ ಬೆಳೆದು ಪಾಕಿಸ್ತಾನಕ್ಕೆ ಜೈ ಎನ್ನುವವರಿಗೆ ಕಾನೂನಿನಲ್ಲಿ ತಿದ್ದುಪಡಿ ತಂದು ಸರಿಯಾದ ಶಿಕ್ಷೆ ನೀಡಬೇಕು. ಅಮೂಲ್ಯಾಳಿಗೆ ಇನ್ನೂ ಸರಿಯಾಗಿ ತಿಳಿವಳಿಕೆ ಇಲ್ಲ. ಆಕೆಯ ಹಿಂದಿರುವ ಪಾಕ್​ ಏಜೆಂಟರನ್ನು ಪತ್ತೆ ಹಚ್ಚಬೇಕು ಎಂದು ಅವರು ನುಡಿದಿದ್ದಾರೆ.
ಆಕೆಯ ತಂದೆ ತಾಯಿಗೇ ಬೇಡವಾದ ಅವಳು ನಮಗೂ ಬೇಡ. ಸೆರೆಮನೆಯಲ್ಲಿಟ್ಟು ಸರಿಯಾದ ಶಿಕ್ಷೆ ಕೊಡಬೇಕು ಎಂದು ಸಂಸದ ಹೇಳಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + seven =
Remember me
