ಮಂಡ್ಯ:ಕರೊನಾ ವೈರಸ್​ ನಂತರದ ಕಾಲದಲ್ಲಿ ಹೃದಯಾಘಾತ ಹಾಗೂ ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ತೀವ್ರ ಆತಂಕವನ್ನು ಸೃಷ್ಟಿ ಮಾಡಿದೆ. ಪ್ರತಿನಿತ್ಯ ಒಂದಲ್ಲ ಒಂದು ಕಡೆ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳುನ ವರದಿಯಾಗುತ್ತಿದ್ದು, ಕಾರಣ ಏನು ಎಂಬುದು ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ.
ಇದೀಗ ಹೃದಯಾಘಾತಕ್ಕೆ ಮಂಡ್ಯದ 24 ವರ್ಷದ ಯುವ ನಟ ಬಲಿಯಾಗಿದ್ದಾರೆ. ಪವನ್ ಮೃತ ಕಲಾವಿದ. ಈತ ಮುಂಬೈನಲ್ಲಿಯೇ ನೆಲೆಸಿದ್ದ. ಇವರು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿ‌ನ ಹರಿಹರಪುರ ಗ್ರಾಮದವರು. ಹಿಂದಿ, ತಮಿಳು ಕಿರುತೆರೆಯಲ್ಲಿ ಕಲಾವಿದರಾಗಿ ಹೊರಹೊಮ್ಮುತ್ತಿದ್ದರು.
ಸಿನಿಮಾಗಳಲ್ಲಿ ಅಭಿನಯಿಸಿ, ಬೆಳ್ಳಿತೆರೆಯಲ್ಲಿ ಮಿಂಚಬೇಕೆಂದು ಕನಸ್ಸು ಕಂಡಿದ್ದ. ತಂದೆ ನಾಗರಾಜು ಹಾಗೂ ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದ ಪವನ್, ಗುರುವಾರ (ಆ.17) ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಪೊಟ್ಯಾಶಿಯಂ ಅಧಿಕವಾಗಿರುವ ಆರೋಗ್ಯಕರ ಆಹಾರಗಳಿವು… ಇವುಗಳ ಸೇವನೆಯಿಂದ ಸಿಗಲಿದೆ ಹಲವು ಲಾಭ
ಇಂದು ಹುಟ್ಟೂರಿನಲ್ಲಿ ಮೃತ ಯುವ ನಟನ ಅಂತ್ಯಸಂಸ್ಕಾರ ನಡೆಯಲಿದೆ. ಮಗನನ್ನು ಕಳೆದುಕೊಂಡು ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
ಕೆಲ ದಿನಗಳ ಹಿಂದಷ್ಟೇ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಥಾಯ್ಲೆಂಡ್​ ರಾಜಧಾನಿ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟರು. ರಾತ್ರಿ ಊಟ ಮಾಡಿ ಮಲಗಿದವರು ಬೆಳಗ್ಗೆ ಎದ್ದೇಳಲಿಲ್ಲ ಎಂದು ಹೇಳಲಾಗುತ್ತಿದೆ. ಸ್ವಂದನಾ ಸಾವಿನ ಸುದ್ದಿ ಒಂದು ದಿನದ ನಂತರ ತಿಳಿಯಿತು. ಬ್ಯಾಂಕಾಕ್​ನಲ್ಲೇ ಮರಣೋತ್ತರ ಪರೀಕ್ಷೆ ಸೇರಿದಂತೆ ಎಲ್ಲ ಪ್ರಕ್ರಿಯೆಯನ್ನು ಮುಗಿಸಿ ಒಂದು ದಿನದ ಬಳಿಕ ಭಾರತಕ್ಕೆ ಕರೆತರಲಾಯಿತು. ಇದಾದ ಬಳಿಕ ಆ. 9ರಂದು ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.(ದಿಗ್ವಿಜಯ ನ್ಯೂಸ್​)
ಹೈಕೋರ್ಟ್​ನಲ್ಲಿ ಮೊಳಗಿದ ನಾಡಗೀತೆ

ಚಂದ್ರಸ್ಪರ್ಶಕ್ಕೆ ಒಂದೇ ಹಂತ; ಲ್ಯಾಂಡರ್​ ಮಾಡ್ಯೂಲ್​ ಯಶಸ್ವಿ ಬೇರ್ಪಡೆ

2 ವರ್ಷ ವರ್ಗಾವಣೆ ಬಂದ್; ಸರ್ಕಾರದ ಮಟ್ಟದಲ್ಲಿ ನಡೆದಿದೆ ಗಂಭೀರ ಚಿಂತನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
