ಬೆಳಗಾವಿ:ಖ್ಯಾತ ನಟಿಯರ ಭಾವಚಿತ್ರವನ್ನು ಡೀಪ್​ ಫೇಕ್​ ಮೂಲಕ ಅಶ್ಲೀಲವಾಗಿ ವಿಡಿಯೋ ಎಡಿಟ್​ ಮಾಡಿದ್ದ ವಿಡಿಯೋಗಳು ಕೆಲವು ದಿನಗಳ ಹಿಂದೆ ವೈರಲ್​ ಆಗಿದ್ದವು. ಈ ಪ್ರಕರಣ ನಂತರ ಇದೇ ರೀತಿ ಕರ್ನಾಟಕದ ಬೆಳಗಾವಿಯಲ್ಲೂ ಸದ್ದು ಮಾಡುತ್ತಿದೆ.
ಯುವತಿ ಮತ್ತು ಆರೋಪಿ ಮಂಥನ್ ಪಾಟೀಲ್ ಒಂದೇ ಊರವನರಾಗಿದ್ದಾರೆ. ಮಂಥನ್ ಪಾಟೀಲ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಆರೋಪಿ ಮಂಥನ್​ ಪಾಟೀಲ್​​ ಯುವತಿಗೆ ಪ್ರೀತಿ ಮಾಡುವಂತೆ ಬೆನ್ನು ಬಿದ್ದಿದ್ದನು. ಯುವತಿ ಈತನ ಲವ್​ ಪ್ರಪೋಸಲ್​ಗೆ ಒಪ್ಪಿರಲಿಲ್ಲ.
ಪ್ರೀತಿ ನಿರಾಕರಿಸಿದ್ದಕ್ಕೆ ಡೀಪ್​ ಫೇಕ್  ಮೂಲಕ ಯಾರದೋ ನಗ್ನ ದೇಹಕ್ಕೆ ಯುವತಿಯ ಭಾವಚಿತ್ರ ಅಳವಡಿಸಿ ಯುವಕ. ನಂತರ dram_quen_arati8 ಅಂತಾ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಎಡಿಟ್​ ಮಾಡಿದ್ದ ಯುವತಿಯರ ಭಾವಚಿತ್ರವನ್ನು ಅಪ್ಲೋಡ್​ ಮಾಡುತ್ತಾನೆ. ಕೂಡಲೆ ಯುವತಿಯರು ಖಾನಾಪುರ ಪೊಲೀಸರಿಗೆ ದೂರು ನೀಡುತ್ತಾರೆ.ಬ್ಯ್ಲಾಕ್​ಮೇಲ್ ​​ ಮಾಡಿರುವ ಘಟನೆ ಜಿಲ್ಲೆಯ ಖಾನಾಪುರ  ಪಟ್ಟಣದಲ್ಲಿ ನಡೆದಿದೆ. ಫೋಟೋ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್​ ಮಾಡಿದ್ದ ಆರೋಪಿ ಮಂಥನ್ ಪಾಟೀಲ್​ (22)​ನನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ ಮಾತನಾಡಿ, ಈ ರೀತಿ ಯಾರಾದರೂ ಫೋಟೊ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೇ ಕೂಡಲೇ ಠಾಣೆಗೆ ಬಂದು ದೂರು ನೀಡಿ . ಫೋಟೋ ಎಡಿಟ್ ಮಾಡಿ ಯುವತಿಯರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ.  ಯುವತಿಯ ಮೇಲೆ ಮತ್ತಷ್ಟು ಒತ್ತಡ ಹಾಕಲು, ಯುವತಿಯ ಮೂರು ಜನ ಗೆಳತಿಯರ ಫೋಟೊ ಎಡಿಟ್ ಮಾಡಿ ಅಪ್ಲೋಡ್ ಮಾಡಿದ್ದನು. ಈ ಸಂಬಂಧ ಯುವತಿಯರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಕೇಸ್ ದಾಖಲಿಸಿಕೊಂಡು ಯುವಕ ಮಂಥನ್ ಪಾಟೀಲ್​ನನ್ನ ಅರೆಸ್ಟ್ ಮಾಡಿದ್ದೇವೆ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 2 =
Remember me
