ವಿಜಯನಗರ:ಮದುವೆಗೆ ಇನ್ನು ಎರಡು ದಿನ ಬಾಕಿ ಇರುವಾಗಲೇ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂನಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಐಶ್ವರ್ಯಾ ಮೃತ ದುರ್ದೈವಿ. ಇನ್ನೂ ಎರಡು ದಿನದಲ್ಲಿ ಮದುವೆ ಆಗಬೇಕಿತ್ತು. ಆದರೆ, ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಆಶೋಕ ಮತ್ತು ಐಶ್ವರ್ಯಾ ಆರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇಬ್ಬರು ಬೇರೆ ಬೇರೆ ಜಾತಿಯಾದ್ದರಿಂದ ಮನೆಯವರ ಒಪ್ಪಿಗೆ ಮೇರೆಗೆ ಅಂತರ್ಜಾತಿ ವಿವಾಹವಾಗಲು ರೆಡಿಯಾಗಿದ್ದರು.
ಅಂತಾರ್ಜಾತಿ ಹಿನ್ನಲೆಯಲ್ಲಿ ಕೆಲವು ಷರತ್ತುಗಳ ಮೇಲೆ ಮದುವೆ ಮಾಡಿಕೊಡಲು ಯುವಕನ ಕಡೆಯವರು ಒಪ್ಪಿದ್ದರು. ನಮ್ಮ ಸಂಪ್ರದಾಯದಂತೆ ಮದುವೆ ಮಾಡಿಕೊಳ್ಳುತ್ತೇವೆ, ಇದೀಗ ಶಾಸ್ತ್ರ ಇದೆ ಎಂದು ಹೇಳಿ ಐಶ್ವರ್ಯಾಳನ್ನು ಹುಡುಗನ ಕಡೆಯವರು ಕರೆದುಕೊಂಡು ಹೋಗಿದ್ದರು. ಅಲ್ಲದೆ, ಹುಡುಗಿ ಕಡೆಯವರು ಯಾರೂ ಬರಬಾರದೆಂದು ಷರತ್ತು ಕೂಡ ಹಾಕಿದ್ದರಂತೆ. ಇದೀಗ ದಿಢೀರನೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕತೆ ಕಟ್ಟುತ್ತಿದ್ದಾರೆ ಅಂತ ಯುವತಿ ಕಡೆಯವರು ಗಂಭೀರ ಆರೋಪ ಮಾಡಿದ್ದಾರೆ.

ಮಗಳು ಐಶ್ವರ್ಯಾ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಎಂದು ಯುವತಿಯ ಪಾಲಕರು ಆರೋಪಿಸಿದ್ದಾರೆ. ಹೊಸಪೇಟೆಯ ಟಿಬಿ ಡ್ಯಾಂ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ಯುವಕ-ಯುವತಿ ಇಬ್ಬರು ಖಾಸಗಿ ಕಂಪನಿಯ ಉದ್ಯೋಗಿಗಳಾಗಿದ್ದರು.
ಇದೊಂದು ಇದ್ದಿದ್ದರೆ ಭಾರತ ವಿಶ್ವಕಪ್​ ಫೈನಲ್​ ಸೋಲುತ್ತಿರಲಿಲ್ಲ: ಕ್ರಿಕೆಟಿಗರ ವಿರುದ್ಧ ನಟ ಚೇತನ್ ಆಕ್ರೋಶ

ಅಪ್ಪಿತಪ್ಪಿ ತಾಮ್ರದ ಬಾಟಲ್/ಪಾತ್ರೆಯಲ್ಲಿ ಇವುಗಳನ್ನು ಸೇವಿಸಬೇಡಿ… ನಿಮಗಿದು ತಿಳಿದಿರಲಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − five =
Remember me
