ಉಡುಪಿ:ಕುಸಿದು ಬಿದ್ದು ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಕಳೆದ ಒಂದೆರಡು ವರ್ಷಗಳಿಂದ ಹೆಚ್ಚಾಗಿ ಕಂಡುಬರುತ್ತಿದ್ದು, ಇಂದು ಕೂಡ ಅಂಥದ್ದೇ ಒಂದು ಪ್ರಕರಣಕ್ಕೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಸಂಬಂಧಿಕರ ಸಮಾರಂಭಕ್ಕೆ ಬಂದಿದ್ದ ಯುವತಿ ಸಂಭ್ರಮಿಸುತ್ತಲೇ ಸಾವಿಗೀಡಾಗಿದ್ದಾಳೆ.
ಉಡುಪಿ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ನಿನ್ನೆ ಸಂಭವಿಸಿದೆ. ಜಿಲ್ಲೆಯ ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಸಾವಿಗೀಡಾದ ಯುವತಿ. ಕೊಳಲಗಿರಿಯಲ್ಲಿ ಸಂಬಂಧಿಕರು ಹಮ್ಮಿಕೊಂಡಿದ್ದ ರೋಸ್ ಸಮಾರಂಭಕ್ಕೆ ನಿನ್ನೆ ರಾತ್ರಿ ಬಂದಿದ್ದ ಈ ಯುವತಿ ಕುಸಿದು ಬಿದ್ದಿದ್ದಳು.
ನಿನ್ನೆ ರಾತ್ರಿ 8.30ರ ಸುಮಾರಿಗೆ ಸಂಭ್ರಮದಲ್ಲಿ ನಡೆದುಕೊಂಡು ಬರುತ್ತಿದ್ದ ಈಕೆ ಕುಸಿದು ಬಿದ್ದ ತಕ್ಷಣವೇ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಈಕೆ ಇಂದು ಸಾವಿಗೀಡಾಗಿದಳು. ಜೋಸ್ನಾ ಕುಸಿದು ಬಿದ್ದ ದೃಶ್ಯ ಮೊಬೈಲ್​ಫೋನ್​ಗಳಲ್ಲಿ ಸೆರೆಯಾಗಿದ್ದು, ಆ ದೃಶ್ಯಾವಳಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ.


ಅಂಬಿ ಇಲ್ಲದ ನಾಲ್ಕು ವರುಷ; ಪತಿಯ ನೆನೆದು ಸುಮಲತಾ ಹೇಳಿದ್ದು ಹೀಗೆ..

ಗಂಡನ ಕಿರುಕುಳ: ದೇಶದಲ್ಲಿ ಕರ್ನಾಟಕವೇ ಪ್ರಥಮ; ಮದ್ಯವ್ಯಸನಿಗಳಿಂದಲೇ ಜಾಸ್ತಿ ಉಪಟಳ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + seven =
Remember me
