ಬೆಂಗಳೂರು:ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್​ ಎಂಬಾತ ಕೊಲೆ ಮಾಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಮುರುಗೇಶ್​ಪಾಳ್ಯದಲ್ಲಿ ಈ ಪ್ರಕರಣ ನಡೆದಿದೆ. ಲೀಲಾ ಪವಿತ್ರ (26) ಕೊಲೆಯಾದ ಯುವತಿ. ಆಂಧ್ರಪ್ರದೇಶ ಮೂಲದ ಈಕೆ ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇಂದು ಕೆಲಸ ಮುಗಿಸಿ ಹೊರಗಡೆ ಬಂದಾಗ ಆರೋಪಿ ಈಕೆಯ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು
ಮುರಗೇಶ್ ಪಾಳ್ಯದ ಎನ್​ಎಎಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಎದೆ, ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಒಟ್ಟು ಸುಮಾರು 16 ಸಲ ಇರಿದು ಕೊಲೆ ಮಾಡಿರುವ ಆರೋಪಿ ಈಗ ಪೊಲೀಸರ ವಶದಲ್ಲಿದ್ದಾನೆ. ಜೀವನ್​ಬಿಮಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಇಬ್ಬರೂ ಐದು ವರ್ಷಗಳಿಂದ ಪ್ರೀತಿಸುತ್ತಿದ್ದು, ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧವಿತ್ತು. ಅದೇ ಕಾರಣಕ್ಕೆ ಯುವತಿ ಯುವಕನಿಂದ ಅಂತರ ಕಾಯ್ದುಕೊಂಡಿದ್ದಳು. ಇದರಿಂದ ಬೇಸತ್ತ ಯುವಕ ಈ ಕೃತ್ಯ ಎಸಗಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಮಗನ ಕಾಟ ತಾಳಲಾಗದೇ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ತಂದೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 2 =
Remember me
