ಹಾವೇರಿ:ಜಿಲ್ಲೆಯಲ್ಲಿ ನಡೆದ ಹೋರಿ ಹಬ್ಬದಲ್ಲಿ ಯುವಕನೊಬ್ಬ ತಿವಿತಕ್ಕೊಳಗಾಗಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆಯೊಂದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ಈ ಅವಘಡ ನಡೆದಿದೆ.
ಗುಡ್ಡದ ಹೊಸಳ್ಳಿ ಗ್ರಾಮದ ನಿವಾಸಿ ಷಣ್ಮುಖ (22) ಹೋರಿಯ ತಿವಿತಕ್ಕೊಳಗಾಗಿ ಮೃತಪಟ್ಟ ಯುವಕ. ಹಿರೇಕೆರೂರು ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನಡೆಯುತ್ತಿದ್ದ ಹೋರಿ ಹಬ್ಬ ನೋಡಲು ಬಂದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.
ರಾಜ್ಯಮಟ್ಟದ ಹೋರಿ ಬೆದರಿಸುವ ಈ ಸ್ಪರ್ಧೆಗೆ ರಾಜ್ಯದ ಮೂಲೆ ಮೂಲೆಗಳಿಂದ ಕೊಬ್ಬಿದ ಹೋರಿಗಳನ್ನು ತರಿಸಲಾಗಿತ್ತು. ಅಖಾಡದಲ್ಲಿ ಓಡುತ್ತಿದ್ದ ಹೋರಿಯನ್ನು ಷಣ್ಮುಖ ನೋಡುತ್ತಿದ್ದು, ಈ ಸಂದರ್ಭದಲ್ಲಿ ಹೋರಿಯೊಂದು ಈತನಿಗೆ ತಿವಿದಿದ್ದು, ಕೊಂಬು ಹೊಟ್ಟೆಗೇ ಹೊಕ್ಕಿದ್ದರಿಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಹಂಸಭಾವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + five =
Remember me
