ಬೆಂಗಳೂರು:ಕ್ಯಾಂಟರ್​ವೊಂದರ ಚಾಲಕನೇ ಇಲ್ಲೊಬ್ಬ ಯುವಕನ ಪಾಲಿಗೆ ಯಮನಾಗಿ ಪರಿಣಮಿಸಿದ್ದಾನೆ. ಪರಿಣಾಮವಾಗಿ, ಗೆಳೆಯನೊಂದಿಗೆ ತೆರಳುತ್ತಿದ್ದ ಯುವಕ, ಅತಿವೇಗದ ಅಜಾಗರೂಕತೆಯ ಚಾಲನೆಗೆ ಬಲಿಯಾಗಿದ್ದಾನೆ. ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಸೊಹಿಲ್ ಬಿಸ್ವಾಸ್ (19) ಸಾವಿಗೀಡಾದ ಯುವಕ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕನಕಪುರ ರಸ್ತೆಯ ಯುನಿಟೆಕ್ ಗೇಟ್ ಬಳಿ ಈ ಅಪಘಾತ ಸಂಭವಿಸಿತ್ತು. ಮೂಲತಃ ಪಶ್ಚಿಮಬಂಗಾಳದ ಈತ ಬೆಂಗಳೂರಿನಲ್ಲಿ ಕಾಂಕ್ರೀಟ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ.
ಇಂದು ಬೆಳಗ್ಗೆ ಕೆಲಸಕ್ಕೆಂದು ಗೆಳೆಯನ ಜತೆ ಬೈಕ್​ನಲ್ಲಿ ಹೊರಟಿದ್ದ ಈತ, ಎಲೆಕ್ಟ್ರಾನಿಕ್ ಸಿಟಿಯಿಂದ ಕನಕಪುರರಸ್ತೆ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಕ್ಯಾಂಟರ್ ಬೈಕ್​ಗೆ ಡಿಕ್ಕಿಯಾಗಿದ್ದು, ಸೊಹಿಲ್ ಮೇಲೆಯೇ ಹರಿದುಹೋಗಿದೆ.
ತೊಡೆಗೆ ಗಂಭೀರ ಗಾಯವಾದ ಸೊಹಿಲ್​ನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಹರಿಯಾಣ ಮೂಲದ ಕ್ಯಾಂಟರ್​ ಚಾಲಕನನ್ನು ಬಂಧಿಸಿರುವ ಕುಮಾರಸ್ವಾಮಿ ಬಡಾವಣೆ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಾ.ಬ್ರೋ ಯಾವಾಗ ವಿದೇಶಕ್ಕೆ ಹೋಗಲ್ಲ?; ಒಂದು ದೇಶಕ್ಕೆ ಹೊರಟಾಗ ಅವರ ಅಧ್ಯಯನ ಹೇಗಿರುತ್ತೆ?; ಇಲ್ಲಿದೆ ಮಾಹಿತಿ..

6 ತಿಂಗಳ ಕಾಲ ಒಂದೊಂದಾಗಿ ಕಾಣೆಯಾಗಿದ್ದವು ಮನೆಯೊಳಗಿದ್ದ ಆಭರಣಗಳು!; ಕೊನೆಗೂ ಬಯಲಾಯ್ತು ಅಸಲಿಯತ್ತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 7 =
Remember me
