ಚಿತ್ರದುರ್ಗ:ಈತ ಗ್ರಾಮಸ್ಥರಿಗೆ ಕುಡಿಯುವ ನೀರು ಸಮಸ್ಯೆ ಆಗಿದೆ ಎಂಬ ಕಾರಣಕ್ಕೆ ಅದರ ವ್ಯವಸ್ಥೆ ಮಾಡಲು ಹೋಗಿದ್ದ. ಆದರೆ ವಿಧಿವಿಪರ್ಯಾಸ ಎಂಬಂತೆ ಈತ ಕುಡಿಯುವ ನೀರಿಗಾಗಿ ವ್ಯವಸ್ಥೆ ಮಾಡುವಾಗಲೇ ಸಾವಿಗೀಡಾಗಿದ್ದಾನೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ಆದರ್ಶ (24) ಸಾವಿಗೀಡಾದ ಯುವಕ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮದ್ದನಕುಂಟೆ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಈ ಸಾವಿಗೆ ಗ್ರಾಮಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮದ್ದನಕುಂಟೆ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಎರಡು ದಿನಗಳಿಂದ ಸಮಸ್ಯೆ ಉಂಟಾಗಿತ್ತು. ಅಲ್ಲಿನ ವಿದ್ಯುತ್ ಸಂಪರ್ಕ ಸರಿಪಡಿಸಲು ಎಂ.ಡಿ. ಕೋಟೆ ಗ್ರಾಮ ಪಂಚಾಯತ್ ಅಧಿಕಾರಿಗಳು ಆದರ್ಶನನ್ನು ಕಳುಹಿಸಿಕೊಟ್ಟಿದ್ದರು. ಆ ಸಂದರ್ಭದಲ್ಲಿ ಈತ ವಿದ್ಯುತ್ ಪ್ರವಹಿಸಿ, ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾನೆ.
ಇದನ್ನೂ ಓದಿ:ಹೆಚ್ಚಾಗುತ್ತಿದೆಯಾ ಪೊಲೀಸರ ಆತ್ಮಹತ್ಯೆ?; ಸರ್ವಿಸ್​ ರಿವಾಲ್ವರ್​​ನಿಂದ ಶೂಟ್​ ಮಾಡ್ಕೊಂಡ ಕಾನ್​ಸ್ಟೆಬಲ್​!
ಬೇಜವಾಬ್ದಾರಿತನ ತೋರಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಂಬಂಧಿಕರು-ಸ್ಥಳೀಯರು ಆಗ್ರಹಿಸಿದ್ದಾರೆ. ಐಮಂಗಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯುವಕ ಸಂಬಂಧಪಟ್ಟ ಕೆಲಸ ಮಾಡುವಾತನೇ ಎಂಬ ಕುರಿತು ಖಚಿತ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ.
ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕನ ಬಂಧನ..

2 ಬಸ್​ಗಳ ಮಧ್ಯೆ ಭೀಕರ ಅಪಘಾತ: ಒಬ್ಬ ಚಾಲಕನಿಗೆ ಗಂಭೀರ ಗಾಯ, 50ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eighteen =
Remember me
