ಚಿಕ್ಕಮಗಳೂರು:ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದ ವೇಳೆ ಯುವಕನೊಬ್ಬ ಬರ್ಬರ ಹತ್ಯೆಯಾಗಿರುವ ಆತಂಕಕಾರಿ ಘಟನೆ ತರೀಕೆರೆ ಪಟ್ಟಣದಲ್ಲಿ ನಿನ್ನೆ (ಜೂ.3) ನಡೆದಿದೆ.
ವರುಣ್​ (28) ಕೊಲೆಯಾದ ಯುವಕ. ಶಾಸಕರ ಅಭಿನಂದನಾ ಸಮಾರಂಭ ಹಿನ್ನೆಲೆಯಲ್ಲಿ ಆರ್ಕೆಸ್ಟ್ರಾ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹಾಡು ಬದಲಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಕಿಡಿಗೇಡಿಯೊಬ್ಬ ವರುಣ್​ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮಂಜು ಹಾಗೂ ಸಂಜು ಎಂಬುವರಿಗೆ ಗಾಯಗಳಾಗಿವೆ.ಇದನ್ನೂ ಓದಿ:ಒಡಿಶಾ ರೈಲು ದುರಂತ: ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿದ ನಟಿ ಪ್ರಿಯಾ ಆನಂದ್!​
ಘಟನೆಯ ವಿವರಣೆಗೆ ಬರುವುದಾದರೆ, ತರೀಕೆರೆ ಶಾಸಕ ಜಿ.ಎಚ್​. ಶ್ರೀನಿವಾಸ್​ ಅವರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದರು. ಆರ್ಕೆಸ್ಟ್ರಾ ತಂಡವನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಈ ವೇಳೆ ಹಾಡು ಬದಲಿಸುವ ವಿಚಾರಕ್ಕೆ ಆರೋಪಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಮಾರಾಮಾರಿ ಉಂಟಾಗಿದೆ.
ಇತ್ತ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಆಕ್ರೋಶಭರಿತ ಕಬಾಬ್​ ಮೂರ್ತಿ, ವರುಣ್​ನ ಹೊಟ್ಟೆ ಹಾಗೂ ಪಕ್ಕೆಲುಬಿಗೆ ಚಾಕು ಇರಿದು ಪರಾರಿಯಾಗಿದ್ದಾನೆ. ರಕ್ತಸ್ರಾವದಿಂದ ಒದ್ದಾಡುತ್ತಿದ್ದ ವರುಣ್​ನನ್ನು ಕೂಡಲೇ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವರುಣ್ ಮೃತಪಟ್ಟಿದ್ದಾನೆ. ಮಂಜು ಹಾಗೂ ಸಂಜು ಎಂಬವರ ಕೈ ಹಾಗೂ ಕಾಲಿಗೂ ಕಬಾಬ್​ ಮೂರ್ತಿ ಚಾಕು ಇರಿದಿದ್ದಾನೆ.ಇದನ್ನೂ ಓದಿ:ಯುವನಿಧಿ ಯೋಜನೆ ಅನುಷ್ಠಾನಕ್ಕೆ ಆದೇಶ; ಏನಿದೆ ಷರತ್ತು? ತಪ್ಪಿಗೆ ದಂಡವೂ ಇದೆ ಎಚ್ಚರಿಕೆ!
ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ಏಜೆನ್ಸೀಸ್​)
ನಟಿಗೆ ಖಾಸಗಿ ಅಂಗ ಪ್ರದರ್ಶನ: ಜೈಲಿನಿಂದ ಬಿಡುಗಡೆಯಾದ ಆರೋಪಿಗೆ ಅದ್ಧೂರಿ ಸ್ವಾಗತ!

ನಿಗಮ-ಮಂಡಳಿ ಲೆಕ್ಕಾಚಾರ ಶುರು: ಪ್ರಮುಖರ ಮೇಲೆ ಆಕಾಂಕ್ಷಿಗಳ ಒತ್ತಡ; ಬಜೆಟ್ ಮಂಡನೆ ಬಳಿಕ ನೇಮಕ ಪ್ರಕ್ರಿಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
