ಬಾಗಲಕೋಟೆ:ಮಳೆ ನೀರಿನಿಂದ ಜಲಾವೃತವಾಗಿದ್ದ ಪಂಪ್​ಸೆಟ್​ ತೆಗೆದುಕೊಂಡು ಬರಲು ಹೋಗಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದ್ದು, ಆತನಿಗಾಗಿ ಹುಡುಕಾಟ ಆರಂಭವಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮದ ದೇವಾನಂದ ಕಮ್ಮಾರ (18) ನಾಪತ್ತೆಯಾದ ಯುವಕ. ಹಿರೇಮಳಗಾವಿ ಗ್ರಾಮದ ಮಲಪ್ರಭಾ ನದಿಯಲ್ಲಿ ಈ ಘಟನೆ ನಡೆದಿದೆ. ಈತನಿಗೆ ಸೇರಿದ್ದ ಪಂಪ್​ಸೆಟ್​ ಮಲಪ್ರಭಾ ನದಿ ದಂಡೆಯಲ್ಲಿತ್ತು. ನದಿಯಲ್ಲಿ ಹರಿವು ಹೆಚ್ಚಾದ್ದರಿಂದ ಪಂಪ್​ಸೆಟ್ ಜಲಾವೃತವಾಗಿತ್ತು.
ಪ್ರವಾಹದಿಂದ ಜಲಾವೃತವಾದ ಪಂಪ್​ಸೆಟ್​ ತೆಗೆದುಕೊಂಡು ಬರಲು ಹೋಗಿದ್ದಾಗ ಈತ ಕಾಣೆಯಾಗಿದ್ದಾನೆ. ಈತ ನೀರಿನಲ್ಲಿ ಮುಳುಗಿರಬಹುದು ಎಂಬ ಶಂಕೆಯ ಮೇರೆಗೆ ಇಳಕಲ್ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ಆರಂಭಿಸಿದ್ದಾರೆ.
‘ಸಾಯೋವರೆಗೂ ಹುಕ್ಕೇರಿಗೆ ನಾನೇ ಎಂಎಲ್​ಎ..’ ಎಂದಿದ್ದ ಉಮೇಶ್ ಕತ್ತಿ: ವಿಜಯವಾಣಿಗೆ ನೀಡಿದ್ದ ಕೊನೇ ಸಂದರ್ಶನ..

ಇಷ್ಟವಿಲ್ಲದ ಮದುವೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ..

62 ವರ್ಷಗಳ ಹಿಂದೆ ಕಳವಾಗಿದ್ದ ನಟರಾಜ ಮೂರ್ತಿ ನ್ಯೂಯಾರ್ಕ್​ನಲ್ಲಿ ಪತ್ತೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 3 =
Remember me
