ಮಂಗಳೂರು:ಇಷ್ಟವಿಲ್ಲದಿದ್ದರೂ ಮದುವೆ ಮಾಡಿಸಿದ್ದಕ್ಕೆ ನೊಂದ ಯುವತಿಯೊಬ್ಬಳು ಮದುವೆಯಾದ ಬೆನ್ನಿಗೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಮಂಗಳೂರು ಹೊರವಲಯದ ಅಂಬ್ಲಮೊಗರು ಎಂಬಲ್ಲಿ ನವವಿವಾಹಿತೆ ರಶ್ಮಿ (24) ಆತ್ಮಹತ್ಯೆ ಮಾಡಿಕೊಂಡಾಕೆ. ಹದಿನೈದು ದಿನಗಳ ಹಿಂದೆ ಈಕೆಯ ವಿವಾಹವಾಗಿತ್ತು. ಗಂಜಿ ಮಠ ಮೂಲದ, ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಜತೆ ರಶ್ಮಿಯ ಮದುವೆ ಮಾಡಿಸಲಾಗಿತ್ತು.
ಸೆ. 3ರಂದು ಅಕ್ಕನ ಮನೆಗೆ ಬಂದಿದ್ದ ರಶ್ಮಿ, ಅಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಅಸ್ವಸ್ಥಗೊಂಡು ಗಂಭೀರ ಪರಿಸ್ಥಿತಿಯಲ್ಲಿದ್ದ ಈಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾಳೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆ ಯಾಕೆ ಇಷ್ಟವಿರಲಿಲ್ಲ ಎಂಬಿತ್ಯಾದಿ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ನಿದ್ರೆ ಬರುತ್ತಿಲ್ಲ ಎಂದು ಬೇಸತ್ತು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

18ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ!; ನಷ್ಟದಲ್ಲಿದೆ 50 ವರ್ಷಗಳ ಇತಿಹಾಸವಿರುವ ಕಂಪನಿ..

62 ವರ್ಷಗಳ ಹಿಂದೆ ಕಳವಾಗಿದ್ದ ನಟರಾಜ ಮೂರ್ತಿ ನ್ಯೂಯಾರ್ಕ್​ನಲ್ಲಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 9 =
Remember me
