ಬೆಂಗಳೂರು:ಪಿಜಿಯಲ್ಲಿ ನೆಲೆಸಿರುವ ಮಹಿಳೆಯರೇ ತುಂಬಾ ಎಚ್ಚರ! ಸ್ನಾನಕ್ಕೆ ಹೋಗುವಾಗ ಒಮ್ಮೆ ಬಾತ್​ರೂಮ್ ಕಿಟಕಿ ಸೇರಿದಂತೆ ಸುತ್ತಮುತ್ತ ಎಲ್ಲವೂ ಸರಿ ಇದೆಯಾ ಎಂಬುದನ್ನು ಪರಿಶೀಲಿಸಿಕೊಳ್ಳಿ. ಕೊಂಚ ಎಚ್ಚರ ತಪ್ಪಿದರೂ ನಿಮ್ಮ ಖಾಸಗಿ ವಿಡಿಯೋಗಳು ರೆಕಾರ್ಡ್ ಆಗಿ, ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
ಸ್ನಾನದ ವಿಡಿಯೋ ತೆಗೆಯುತ್ತಿದ್ದ ವಿಕೃತ ಮನಸ್ಸಿನ ಕಾಮುಕನೊಬ್ಬ ರೆಡ್​ಹ್ಯಾಂಡ್​ ಹಾಕಿ ಸಿಕ್ಕಿಬಿದ್ದಿರುವ ಘಟನೆ ಮಹದೇವಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಹಿಂದೆಯೂ ಇಂಥದ್ದೇ ಒಂದು ಘಟನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಲೇಡಿಸ್​ ಪಿಜಿಯಲ್ಲಿ ವಾಸಿಸುವವರು ತುಂಬಾ ಎಚ್ಚರಿಕೆಯಿಂದ ಇರಬೇಕಾಗಿದೆ.
ಇದನ್ನೂ ಓದಿ:ಆಸ್ಪತ್ರೆಯ ಐಸಿಯುನಲ್ಲೇ ಡಾನ್ಸ್​: ಬಾಲಕನ ಸಕಾರಾತ್ಮಕ ಮನೋಭಾವಕ್ಕೆ ನೆಟ್ಟಿಗರು ಫಿದಾ!
ಚಿಕ್ಕಬಳ್ಳಾಪುರ ಮೂಲದ ಅಶೋಕ್ ಬಂಧಿತ ಯುವಕ. ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡ್ತಿದ್ದ ಆರೋಪಿ ಅಶೋಕ್​, ಮಹದೇವಪುರದ ಹೂಡಿಯಲ್ಲಿರುವ ಪಿಜಿಯಲ್ಲಿ ವಾಸ ಮಾಡುತ್ತಿದ್ದ. ಅದೇ ಪಿಜಿಯ ಮುಂಭಾಗದಲ್ಲೇ ಲೇಡಿಸ್​ ಪಿಜಿಯು ಇತ್ತು. ಈತ ಲೇಡಿಸ್ ಪಿಜಿ ಸ್ನಾನದ ರೂಮನ್ನೇ ನೋಡುತ್ತಾ ಕುಳಿತಿರುತ್ತಿದ್ದ. ಯುವತಿಯರು ಸ್ನಾನ ಮಾಡಲು ಬರುತ್ತಿದ್ದಂತೆ ಅಲರ್ಟ್ ಆಗುತ್ತಿದ್ದ.
ಯುವತಿಯರು ಸ್ನಾನ ಮಾಡುವ ವಿಡಿಯೋವನ್ನು ವೆಂಟಿಲೇಷನ್ ಮೂಲಕ ಮೊಬೈಲ್​ನಲ್ಲಿ ರೆಕಾರ್ಡ್​ ಮಾಡುತ್ತಿದ್ದಾರೆ. ಇದೇ ರೀತಿ ವಿಡಿಯೋ ಮಾಡುವಾಗ ಆರೋಪಿ ಅಶೋಕ್​ ಜೂನ್​ 21ರಂದು ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯರು ಆತನನ್ನು ಹಿಡಿದು ಮಹದೇವಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ಇ-ಸರ್ವೇ ಕೆಲಸದಿಂದ ಕೈಬಿಡಲು ಆಗ್ರಹ -ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ 27ಕ್ಕೆ
ಆರೋಪಿ ಅಶೋಕನ ಮೊಬೈಲ್ ಪರಿಶೀಲನೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಹೊರಬಿದ್ದಿದೆ. ಆತನ ಮೊಬೈಲ್​ನಲ್ಲಿ 7 ಯುವತಿಯರ ಸ್ನಾನದ ವಿಡಿಯೋ ಪತ್ತೆಯಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿ ಮಹದೇವಪುರ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.(ದಿಗ್ವಿಜಯ ನ್ಯೂಸ್​)
ಪಿಜಿಯಲ್ಲಿರೋ ಹುಡುಗಿಯರೇ ಎಚ್ಚರ! ಪ್ರಾಣ ಪಣಕ್ಕಿಟ್ಟು ಖಾಸಗಿ ವಿಡಿಯೋ ರೆಕಾರ್ಡ್ ಮಾಡ್ತಿದ್ದ ಕಾಮುಕ ಅಂದರ್​

ಮೈ-ಬೆಂ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ: ಯುವಕರಿಬ್ಬರು ಸ್ಥಳದಲ್ಲೇ ದಾರುಣ ಅಂತ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 + twelve =
Remember me
