ಬೆಂಗಳೂರು:ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್‌ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜುಲೈ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 2ರವರೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಆಗಸ್ಟ್ 3 ರಿಂದ 8ರವರೆಗೆ ನಾಮಪತ್ರ ಪರಿಶೀಲನೆ ಮಾಡಲಾಗುವುದು. ಆಗಸ್ಟ್ 9ರಂದು ನಾಮಪತ್ರ ಅಂತಿಮ ಮಾಡಲಾಗುವುದು. ಅತಿ ಹೆಚ್ಚು ಮತ ಪಡೆಯುವವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಮತಗಳ ಆಧಾರದ ಮೇಲೆ ನಂತರದ ಸ್ಥಾನ ಪಡೆಯುವರಿಗೆ ಇತರೆ ಸ್ಥಾನ ನೀಡಲಾಗುವುದು. ಈ ವೇಳೆ ಪಕ್ಷವು ಅಗ್ರ ಮೂರು ಸ್ಥಾನ ಪಡೆದವರ ಸಂದರ್ಶನವನ್ನು ಮಾಡಲಿದೆ ಎಂದು ಮಾಹಿತಿ ನೀಡಿದರು.
ಸದಸ್ಯತ್ವ ನೋಂದಣಿಯನ್ನು ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರ ವರೆಗೂ ಮಾಡಲಾಗುವುದು. ಯುವ ಕಾಂಗ್ರೆಸ್ ಸದಸ್ಯರಾಗಲು ಬಯಸುವವರು ಆನ್‌ಲೈನ್ ಮೂಲಕ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು. ಆನ್‌ಲೈನ್ ಸದಸ್ಯತ್ವ ಪಡೆದವರಿಗೆ ಸದಸ್ಯತ್ವ ಪಡೆದ ದಿನದಿಂದಲೇ ಬ್ಲಾಕ್, ಜಿಲ್ಲಾ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲು ಮತದಾನ ಮಾಡುವ ಅಧಿಕಾರ ಸಿಗಲಿದೆ. ಓರ್ವ ಸದಸ್ಯ ಆರು ಮಂದಿ ಪದಾಧಿಕಾರಿಗಳಿಗೆ ಮತ ಹಾಕುವ ಅಧಿಕಾರವಿರುತ್ತದೆ. ರಾಜ್ಯಾಧ್ಯಕ್ಷ, ರಾಜ್ಯ ಮಟ್ಟದ ಪದಾಧಿಕಾರಿ, ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಆಯ್ಕೆಗೆ ಮತ ಹಾಕಬಹುದು. ಹೆಚ್ಚಿನ ಮಾಹಿತಿಗಾಗಿ ಐವೈಸಿ ಆಪ್‌ನಲ್ಲಿ ವೀಕ್ಷಿಸಬಹುದು ಎಂದು ತಿಳಿಸಿದರು.
ಯುವ ಕಾಂಗ್ರೆಸ್ ಸದಸ್ಯತ್ವ ಪಡೆಯುವವರು 35 ವರ್ಷದೊಳಗಿನವರಾಗಿರಬೇಕು. ಸದಸ್ಯತ್ವ ನೋಂದಣಿ ಶುಲ್ಕ ರೂ 50 ರೂ. ಕಟ್ಟಬೇಕು. ಅವರಿಗೆ ಗುರುತಿನ ಚೀಟಿ ನೀಡಲಾಗುವುದು. ಮತದಾನ ಮಾಡುವಾಗ ಮತದಾರರ ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ. ಚುನಾವಣೆಯನ್ನು ಬಹಳ ಪಾರದರ್ಶಕವಾಗಿ ನಡೆಸಲಾಗುವುದು. ಸದಸ್ಯತ್ವ ನೋಂದಣಿ ಸಮಯದಲ್ಲಿ ಸದಸ್ಯತ್ವ ಪಡೆಯುವವರ ಮುಖಚರ್ಯೆಯನ್ನು ಸ್ಕ್ಯಾನ್ ಮಾಡಲಾಗುವುದು. ಇಡೀ ದೇಶದಲ್ಲಿ ಹೊಸ ನಾಯಕರ ಸೃಷ್ಟಿ ಮಾಡಲು ಪ್ರಕ್ರಿಯೆ ಆರಂಭವಾಗಿದ್ದು, ಯುವ ನಾಯಕರನ್ನು ಬೆಳೆಸಲು ರಾಹುಲ್ ಗಾಂಧಿ ಅವರು ತೀರ್ಮಾನಿಸಿದ್ದಾರೆ ಎಂದು ಹೇಳಿದರು.
ಬ್ಲಾಕ್, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಯುವಕರು ನಾಯಕರನ್ನು ನೇಮಕ ಮಾಡುವ ಪದ್ಧತಿ ಬೇಡ ಎಂದು ಮನಗಂಡು ಎನ್‌ಎಸ್‌ಯುಐ ಹಾಗೂ ಯುವ ಕಾಂಗ್ರೆಸ್‌ನಲ್ಲಿ ಮತದಾನದ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿದೆ. ಪಕ್ಷದ ಚುನಾವಣಾ ಆಯೋಗದ ಮೂಲಕ ಪಕ್ಷದ ಆಂತರಿಕ ಚುನಾವಣೆ ನಡೆಸಲು ತೀರ್ಮಾನ ಮಾಡಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಹೊಸ ನಾಯಕರನ್ನು ಹುಡುಕಲು ಈ ಆಂತರಿಕ ಚುನಾವಣೆ ನಡೆಸಲು ತೀರ್ಮಾನಿಸಿದ್ದೇವೆ ಎಂದರು.
ಈ ಚುನಾವಣೆಯಲ್ಲಿ ಮಹಿಳೆಯರು, ಪರಿಶಿಷ್ಟರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದವರಿಗೆ ಮೀಸಲಾತಿ ನೀಡಲಾಗುವುದು. ಬಳ್ಳಾರಿ, ಮಂಡ್ಯ, ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಕೇಂದ್ರ ಸೇರಿದಂತೆ ಐದು ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಲಾಗಿದೆ ಎಂದು ತಿಳಿಸಿದರು.ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ, ಪಕ್ಷದ ಚುನಾವಣಾ ಉಸ್ತುವಾರಿ ಪಿ.ಐ. ಅಹ್ಮದ್ ನಾಸಿರ್, ಪ್ರದೇಶ ರಿಟರ್ನಿಂಗ್ ಅಧಿಕಾರಿ ಪ್ರಮೋದ್ ಕುಮಾರ್, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿ ದೀಪಕ್ ತಿಮಯ್ಯ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − three =
Remember me
