ಕೊಡಗು:ಕಾಡಿನ ಪ್ರಾಣಿಗಳು ನಾಡಿಗೆ ಬರುವ ಜತೆಗೆ ಸಾಕುಪ್ರಾಣಿಗಳು ಮತ್ತು ಮನುಷ್ಯರ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವು-ನೋವು ಸಂಭವಿಸಿದ ಹಲವು ಉದಾಹರಣೆಗಳಿವೆ. ಚಿರತೆ, ಕಾಡಾನೆ, ಹುಲಿ ದಾಳಿಗೆ ನಾಡಿನ ಜನರು ಹೈರಾಣಾಗಿದ್ದು, ಕೆಲವೆಡೆ ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.
ಇದರ ಮುಂದುವರಿದ ಭಾಗವಾಗಿ ಇಂದು ಹಾಡಹಗಲೇ ಹದಿಹರೆಯದ ಯುವಕನೊಬ್ಬ ಹುಲಿ ದಾಳಿಗೆ ಬಲಿಯಾಗಿದ್ದಾನೆ. ಕೊಡಗು ಜಿಲ್ಲೆಯ ವೀರಹೊಸನಹಳ್ಳಿ ಸೊಳ್ಳೆಪುರ ನಿವಾಸಿ ಚೇತನ್​ (18) ಸಾವಿಗೀಡಾದ ಯುವಕ. ಪೊನ್ನಂಪೇಟೆ ತಾಲೂಕಿನ ಕುಟ್ಡ ಸಮೀಪದ ನಾಲ್ಕೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಎನ್.ಪೂಣಚ್ಚ ಎಂಬವರಿಗೆ ಸೇರಿದ ತೋಟಕ್ಕೆ ಕಾಫಿ ಕೊಯ್ಲು ಮಾಡಲು ಚೇತನ್ ಬಂದಿದ್ದು, ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಹುಲಿ ಮೈಮೇಲೆರಗಿದೆ. ತೋಟದ ಸಮೀಪ ಹುಲಿ ನಡೆಸಿದ ದಾಳಿಗೆ ಚೇತನ್ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ನಾಗರಹೊಳೆ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮದುವೆ ದಿನವೇ ಫಿಸಿಯೋಥೆರಪಿ ಎಕ್ಸಾಂ; ವಿವಾಹದ ದಿರಿಸಿನಲ್ಲೇ ಪರೀಕ್ಷೆಗೆ ಬಂದ ವಧು

ಸಿಟ್ಟು ಸಿಕ್ಕಾಪಟ್ಟೆ ಹೆಚ್ಚಾಗಲೆಂದು 2 ತಿಂಗಳು ಔಷಧ ಬಿಟ್ಟಿದ್ದ; ಸಚಿವರನ್ನು ಕೊಂದ ಎಎಸ್​ಐ ಬಾಯ್ಬಿಟ್ಟ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
