ಮಂಡ್ಯ:ಕ್ರಿಕೆಟ್​ ವಿಚಾರವಾಗಿ ನಡೆದ ಕಿರಿಕ್​ಗೆ ಒಂದು ಜೀವಂತ ವಿಕೆಟ್​ ಉರುಳಿದೆ. ಅರ್ಥಾತ್, ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸುವ ವಿಷಯವಾಗಿ ಗೆಳೆಯರ ಮಧ್ಯೆ ನಡೆದ ಘರ್ಷಣೆ ಒಬ್ಬನ ಭೀಕರ ಕೊಲೆಗೆ ಕಾರಣವಾಗಿದೆ. ಪರಿಣಾಮವಾಗಿ ಯುವಕನೊಬ್ಬ ಬರ್ಬರವಾಗಿ ಹತ್ಯೆಯಾಗಿದ್ದಾನೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲೆಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೆಜ್ಜಲಗೆರೆ ಗ್ರಾಮದ ಹೇಮಂತ್ (25) ಕೊಲೆಯಾದ ಯುವಕ. ಈತ ಸೋಮವಾರ ರಾತ್ರಿ ಬೈಕ್​ನಲ್ಲಿ ಮನೆಗೆ ಮರಳುತ್ತಿದ್ದಾಗ, ಮಾರ್ಗಮಧ್ಯೆ ದಾಳಿ ನಡೆಸಿದ ದುಷ್ಕರ್ಮಿಗಳು ಮೊದಲಿಗೆ ಕಾರ್ ಡಿಕ್ಕಿ ಹೊಡೆಸಿದ್ದಾರೆ. ನಂತರ ಹೇಮಂತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಷ್ಟು ಸಾಲದು ಎಂದು ಬಳಿಕ ತಲೆ ಮೇಲೆ ಕಲ್ಲು ಕೂಡ ಎತ್ತಿ ಹಾಕಿದ್ದಾರೆ. ಇದರಿಂದ ಹೇಮಂತ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಇದನ್ನೂ ಓದಿ:ಅಪ್ಪ-ಮಗ ಇಬ್ಬರೂ ಕರೊನಾಗೆ ಬಲಿ; ಸೋಂಕಿಗೆ ಒಳಗಾಗಿರುವ ಮತ್ತೊಬ್ಬ ಮಗನ ಪರಿಸ್ಥಿತಿ ಚಿಂತಾಜನಕ..
ಈ ಕೊಲೆ ಹಿಂದೆ ಹಳೇ ವೈಷಮ್ಯವೂ ಇದೆ ಎನ್ನಲಾಗಿದ್ದು, ಮತ್ತೊಂದೆಡೆ ಕ್ರಿಕೆಟ್ ಟೂರ್ನಿ ಕುರಿತ ವಿವಾದವೂ ಕಾರಣ ಎನ್ನಲಾಗಿದೆ. ಕ್ರಿಕೆಟ್​ ಟೂರ್ನಿ ವಿವಾದ ವಿಕೋಪಕ್ಕೆ ತೆರಳಿ ಸ್ನೇಹಿತರಾದ ಇಂದ್ರಕುಮಾರ್ ಹಾಗೂ ಸ್ವರೂಪ್ ಕೊಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಕೊಲೆ ಹಿನ್ನೆಲೆಯಲ್ಲಿ ಗೆಜ್ಜಲಗೆರೆಯಲ್ಲಿ ಆತಂಕದ ವಾತವಾರಣ ಉಂಟಾಗಿದ್ದು, ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

‘ತಂದೆ ಕಾಣೆಯಾಗಿದ್ದಾರೆ, ಹುಡುಕಿಕೊಡಿ ಪ್ಲೀಸ್​.. ಲಾಕ್​ಡೌನ್​ನಿಂದ ಹೊರಗೆ ಹೋಗಲಾಗುತ್ತಿಲ್ಲ, ಸಹಾಯ ಮಾಡಿ: ಪುತ್ರನ ವಿನಂತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + five =
Remember me
