ಮದ್ದೂರು:ಹಾಲಿ ಐಪಿಎಲ್​ ಋತು ಅನೇಕ ಕಾರಣಗಳಿಗೆ ಹೆಚ್ಚು ಸದ್ದು ಮಾಡುತ್ತಿದ್ದು ಈ ಮಧ್ಯೆ ತಂಡಗಳ ಪರ ಕ್ರಿಕೆಟ್​ ಬೆಟ್ಟಿಂಗ್​ ಕೂಡ ಜೋರಾಗಿ ನಡೆಯುತ್ತಿದ್ದು ಹಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
ಇದೀಗ ಪ್ರಕರಣ ಒಂದರಲ್ಲಿ ಬೆಟ್ಟಿಂಗ್​ ಹಃಣ ನೀಡುವ ಸಂಬಂಧ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಣ ಗೆದ್ದ ಯುವಕನನ್ನು ಸೌದೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಬೊಆರಪುರ ಸಮೀಪ ಇರುವ ವಿ.ಸಿ.ನಾಲೆ ಬಳಿ ನಡೆದಿದೆ.
ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಗ್ರಾಮದ ಪುನೀತ್​(28) ಬೆಟ್ಟಿಂಗ್ ಗೀಳಿಗೆ ಬಲಿಯಾದ ಯುವಕ. ಐಪಿಎಲ್​ ಶುರುವಾದಾಗಿನಿಂದಲೂ ಪುನೀತ್​ ಬೆಟ್ಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದು ಹಣ ಕಟ್ಟಿ ಗೆಲುವು ಕಂಡಿದ್ದರು.
ಗುರುವಾರ ರಾತ್ರಿ ಪುನೀತ್​ ತಾವು ಗೆದ್ದ ಹಣ ನೀಡುವಂತೆ ಬೋರಾಪುರದ ಶರತ್​ ಹಅಗು ಮಂಜು ಬಳಿ ಕೇಳಿಕೊಂಡಿದ್ದಾರೆ. ಈ ವೇಳೆ ಯುವಕರ ಗುಂಪು ತಾವು ವಿ.ಸಿ.ನಾಲೆ ಬಳಿ ಇದ್ದು ಅಲ್ಲಿಗೆ ಬರುವಂತೆ ಪುನೀತ್​ಗೆ ಸೂಚಿಸಿದ್ದಾರೆ. ಸ್ಥಳಕ್ಕೆ ತೆರಳಿದ ಪುನೀತ್​ ತಮ್ಮ ಹಣ ನೀಡುವಂತೆ ಯುವಕರ ಗುಂಪಿಗೆ ಹೇಳಿದ್ದಾರೆ.
ಇದನ್ನೂ ಓದಿ:VIDEO| ನೋಡ ನೋಡುತ್ತಿದ್ದಂತೆ ಬಡಿದಾಡಿಕೊಂಡ ಪ್ರಯಾಣಿಕರು; ಕಾರಣ ನಿಗೂಢ ಎಂದ ಪೊಲೀಸರು
ಈ ವೇಳೆ ಏಕಾಏಕಿ ಸೌದೆಯಿಂದ ಯುವಕರ ತಂಡ ಪುನೀತ್​ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಪುನೀತ್​ರನ್ನು ಕೆ.ಎಂ.ಡೊಡ್ಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಪುನೀತ್​ ಕೊನೆಯುಸಿರು ಎಳೆದಿದ್ದಾರೆ.
ಮದ್ದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ನಡೆದ 24 ಘಂಟೆಗಳ ಒಳಗೆ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎನ್​. ಯತೀಶ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − four =
Remember me
