ಬೆಂಗಳೂರು:ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ತೆಯಲ್ಲಿರುವ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಅಮರ್​ ಶೆಟ್ಟಿ(31) ಮೃತ ಯುವಕ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕೆ.ಪಿ. ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ವೈದ್ಯ ಹಾಗೂ ಕ್ಲಿನಿಕ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ದುಬೈನಲ್ಲಿದ್ದ ಯುವಕ ಅಮರ್​ ಶೆಟ್ಟಿ ಒಂದು ವರ್ಷದ ಹಿಂದೆ ತಾಯ್ನಾಡಿಗೆ ವಾಪಸ್​​ ಬಂದು ತಮ್ಮದೇ ಆದ ಹೋಟೆಲ್​ ಬಿಸಿನೆಸ್​ಅನ್ನು ಶುರು ಮಾಡಿದ್ದರು. ಆಗಸ್ಟ್​ 13ರಂದು ಜ್ವರ ಕಾಣಿಸಿಕೊಂಡಿದ್ದ ಕಾರಣ ಅಮರ್​ ಕೆ.ಪಿ. ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್​ಗೆ ತೆರಳಿ ಇಂಜೆಕ್ಷನ್​ ಪಡೆದಿದ್ದರು.
ಇದನ್ನೂ ಓದಿ:ಲಡಾಖ್​ ಪ್ರವಾಸದಲ್ಲಿ ಪ್ಯಾಂಗಾಂಗ್​ ಸರೋವರಕ್ಕೆ ಬೈಕ್​ ರೈಡ್​ ಮಾಡಿದ ರಾಹುಲ್​ ಗಾಂಧಿ
ಇಂಜೆಕ್ಷನ್​ ಅಡ್ಡಪರಿಣಾಮದಿಂದ ಯುವಕನಿಗೆ ಜ್ವರ ಕಡಿಮೆಯಾಗದಿದ್ದಾಗ ತಕ್ಷಣವೇ ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯನ್ನು ದಾಖಲಿಸಿಕೊಂಡ ವೈದ್ಯರು ಪರೀಕ್ಷೆ ನಡೆಸಿ ಇಂಜೆಕ್ಷನ್​ ಅಡ್ಡಪರಿಣಾಮದಿಂದಾಗಿ ಬಹು ಅಂಗಾಂಗ ವೈಫಲ್ಯವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಚಕಿತ್ಸೆ ಫಲಕಾರಿಯಾಗದೆ ಅಮರ್​ ಶೆಟ್ಟಿ ಶುಕ್ರವಾರ ನಿಧನರಾಗಿದ್ದಾರೆ. ವೈದ್ಯನ ನಿರ್ಲಕ್ಷಕ್ಷ್ಯಕ್ಕೆ ಯುವಕನ ಕುಟುಂಬಸ್ಥರು ಕಿಡಿಕಾರಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೆ.ಪಿ. ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × five =
Remember me
