ಬೆಂಗಳೂರು:ತಿರುವಿನಲ್ಲಿ ಬೈಕ್​ ಸ್ಕಿಡ್​ ಆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್​ ತಾಲ್ಲೂಕಿನ ಜಿಗಣಿ-ಹಾರೋಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಸಾತನೂರು ನಿವಾಸಿ ಶಿವ(24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬೈಕಿನ ಹಿಂಬದಿ ಕುಳಿತಿದ್ದ ಈರಪ್ಪ ಹಾಗೂ ಆಂಧ್ರಪ್ರದೇಶ ಮೂಲದ ಟಪ್ಪಗಾರಿ ಮಚ್ಚೇಂದ್ರ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಕುಮಾರಸ್ವಾಮಿಗೆ ಜ್ಞಾನ, ತಿಳುವಳಿಕೆ ಇರಬೇಕು; ಮಾಜಿ ಸಿಎಂ ವಿರುದ್ಧ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ
ಶಿವ, ಈರಪ್ಪ ಹಾಗೂ ಟಪ್ಪಗಾರಿ ಮಚ್ಚೇಂದ್ರ ರಾಯಲ್​ ಎನ್​ಫೀಲ್ಡ್​ ಬೈಕಿನಲ್ಲಿ ಮರಸೂರು ಗೇಟ್​ನಿಂದ ಸಾತನೂರಿನತ್ತ ತೆರಳುತ್ತಿದ್ದರು. ಜಿಗಣಿ-ಹಾರೋಹಳ್ಳಿ ಮುಖ್ಯರಸ್ತೆಯ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಬೈಕ್​ ಸ್ಕಿಡ್​ ಆಗಿದ್ದು, ತೀವ್ರ ರಕ್ತಸ್ರಾವದಿಂದ ಶಿವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಈರಪ್ಪ ಹಾಗೂ ಟಪ್ಪಗಾರಿ ಮಚ್ಚೇಂದ್ರನನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಒಂದು ವಾರದ ಅವಧಿಯಲ್ಲಿ ಇದು ಎರಡನೇ ಅಪಘಾತವಾಗಿದ್ದು, ಆಗಸ್ಟ್​ 01ರಂದು ಹಾಲೋಬ್ಲಾಕ್​ ತುಂಬಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಮುಗುಚಿದ ಪರಿಣಾಮ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಜಿಗಣಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನೂ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 4 =
Remember me
