ವಿಜಯಪುರ:ಚಲಿಸುವ ಬಸ್​ನ ಹಿಂಬದಿ ಚಕ್ರದಡಿ ಸಿಲುಕಿ ಯುವಕನೋರ್ವನೋರ್ವ ಅಸುನೀಗಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಯುವಕನ ಸಾವು ಆತಂಕದ ಜೊತೆಗೆ ಅಚ್ಚರಿಗೆ ಕಾರಣವಾಗಿದೆ.
ವಿಜಯಪುರ ನಗರದಲ್ಲಿರುವ ಕೇಂದ್ರ ಬಸ್​ ನಿಲ್ದಾಣದ ಬಳಿ ಇರುವ ಟಿಪ್ಪು ಸುಲ್ತಾನ್​ ವೃತ್ತದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಮೃತರು ಹಾಸನ ಮೂಲದವರು ಎಂದು ತಿಳಿದು ಬಂದಿದೆ. ಸಿಸಿಟಿವಿ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇದನ್ನೂ ಓದಿ:ವಾಹನ ಸವಾರರು ಗಮನಿಸಿ; ಪೀಣ್ಯ ಫ್ಲೈಓವರ್​ನಲ್ಲಿ ನಾಲ್ಕು ದಿನಗಳ ಕಾಲ ಸಂಚಾರ ಸ್ಥಗಿತ
ವೈರಲ್​ ಆಗಿರುವ ವಿಡಿಯೋದಲ್ಲಿ ರಸ್ತೆಬದಿ ಫೋನಿನಲ್ಲಿ ಮಾತನಾಡುತ್ತ ನಿಂತಿರುವ ಯುವಕ ಬಸ್​ ಬರುತ್ತಿದ್ದಂತೆ ಏಕಾಏಕಿ ತನ್ನ ಕೈಯಲ್ಲಿದ್ದ ಮೊಬೈಲ್​ ಎಸೆದು ಹಿಂಬದಿ ಚಕ್ರದಡಿ ಬಿದ್ದಿದ್ದಾನೆ. ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಈ ಎಲ್ಲ ದೃಶ್ಯಾವಳಿಗಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳಲೆಂದೇ ಯುವಕ ಹಿಂದಿನ ಚಕ್ರಕ್ಕೆ ತಲೆ ಕೊಟ್ಟಿದ್ಧಾನೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಸ್ಥಳದಲ್ಲಿ ಯುವಕನ ಮೊಬೈಲ್​ ಪತ್ತೆಯಾಗಿದ್ದು, ಆತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಠಾಣೆ ಪೊಲೀಸರು ಮೃತ ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 4 =
Remember me
