ಕೊಡಗು:ತೋಟಕ್ಕೆ ದಾಳಿ ಇಟ್ಟ ಹುಲಿಯೊಂದು ಯುವಕನ ಮೇಲೆರಗಿ ಸಾಯಿಸಿ ಹೋಗಿದ್ದು, ಆತನ ಶವ ಅಲ್ಲೇ ಇಟ್ಟುಕೊಂಡು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಈ ಪ್ರಕರಣ ನಡೆದಿದೆ.
ವಿರಾಜಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದ ತೋಟದಲ್ಲಿ ಕಾಳುಮೆಣಸು ಕೊಯ್ಲು ನಡೆಸುತ್ತಿದ್ದ ಹುಲಿ ದಾಳಿ ನಡೆಸಿದ್ದು, ಕಾರ್ಮಿಕ ಯುವಕ 30 ವರ್ಷದ ಗಣೇಶ್ ಎಂಬಾತ ಸಾವಿಗೀಡಾಗಿದ್ದಾನೆ.
ಈ ಪರಿಸರದಲ್ಲಿ ಕಳೆದ ವರ್ಷ ಮೂವರು ಹುಲಿ ದಾಳಿಗೆ ಬಲಿಯಾಗಿದ್ದು, ಈ ಸಲ ಮತ್ತೊಬ್ಬರು ಸಾವಿಗೀಡಾದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಸಿಎಂಗೆ ಅವಾಚ್ಯವಾಗಿ ನಿಂದಿಸಿದ್ದ ಶಾಬಾಜ್‌ ಖಾನ್ ಕೊನೆಗೂ ಪೊಲೀಸ್ ವಶಕ್ಕೆ..
ಯುವಕನ ಶವವನ್ನು ಸ್ಥಳದಲ್ಲೇ ಇರಿಸಿ ಪ್ರತಿಭಟನೆ ನಡೆಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಎಸ್​ಪಿ ಅಯ್ಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅರಣ್ಯ ಅಧಿಕಾರಿಗಳು ಹುಲಿಯನ್ನು ಹಿಡಿಯಬೇಕು, ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಜನ್ಮದಿನದಂದೇ ಮರಣ: ಬೈಕ್​ನಲ್ಲಿ ಹೋಗುವಾಗ ತಲೆ ಮೇಲೇ ಬಿದ್ದ ಮರ..!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − eight =
Remember me
