ಬೆಂಗಳೂರು:ಪ್ರತಿಭಟನಾನಿರತ ಕೆಪಿಎಸ್ಸಿ ವಿದ್ಯಾರ್ಥಿಗಳನ್ನು ಬಂಧಿಸಿದ್ದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ವಿಜಯನಗರ ಪೊಲೀಸ್ ಠಾಣೆಗೆ ಭಾನುವಾರ ಮುತ್ತಿಗೆ ಹಾಕಿದರು.
ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ನ್ಯಾಯಯುತ ಬೇಡಿಕೆ ಮುಂದಿಟ್ಟು ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಿದ್ದಲ್ಲದೆ, ಬಳಿಕ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ತಿಳಿಸಿದ್ದಾರೆ.
ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಫ್ರೀಡಂ ಪಾರ್ಕಿನಲ್ಲಿ ಶಾಂತಿಯುವ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಈ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದು ಪೊಲೀಸ್ ಠಾಣೆಯಲ್ಲಿ ಇಡಲಾಗಿದೆ. ಪೊಲೀಸರ ಈ ಕ್ರಮವನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದೇವೆ. ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದು ಆಕ್ಷೇಪಾರ್ಹ ಎಂದು ಟೀಕಿಸಿದ್ದಾರೆ.
ಪ್ರತಿಭಟನೆಯನ್ನು ಪೊಲೀಸ್ ಬಲದ ಮೂಲಕ ಹತ್ತಿಕ್ಕುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಇದು ಖಂಡನಾರ್ಹ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ, ಪದಾಧಿಕಾರಿಗಳು, ಪ್ರಮುಖ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 19 =
Remember me
