ಬೆಂಗಳೂರು:ನಿರುದ್ಯೋಗಿ ಯುವಜನತೆಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಉದ್ದೇಶದೊಂದಿಗೆ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಯುವ ಸಮೃದ್ಧಿ ಸಮಾವೇಶ- ಉದ್ಯೋಗ ಮೇಳಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಮೊದಲ ದಿನವೇ ಕೌಂಟರ್​ಗಳೆಲ್ಲ ಯುವಜನರಿಂದ ತುಂಬಿ ತುಳುಕಿದವು. ಸೋಮವಾರ ಅಂದಾಜು 1 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸಿ, ವಿವಿಧ ಕಂಪನಿಗಳಿಗೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಕೆಲ ಅಭ್ಯರ್ಥಿಗಳು ಸಂದರ್ಶನವನ್ನೂ ಎದುರಿಸಿ ಅದೃಷ್ಟ ಪರೀಕ್ಷೆ ನಡೆಸಿದ್ದಾರೆ. ಈ ಉದ್ಯೋಗ ಮೇಳದಲ್ಲಿ 1 ಲಕ್ಷಕ್ಕೂ ಅಧಿಕ ಉದ್ಯೋಗಾವಕಾಶಗಳಿದ್ದು, 600ಕ್ಕೂ ಅಧಿಕ ಖಾಸಗಿ ಕಂಪನಿಗಳು ಪಾಲ್ಗೊಂಡಿವೆ.
ಅಚ್ಚುಕಟ್ಟಾದ ವ್ಯವಸ್ಥೆ!:ರಾಜ್ಯಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದರಿಂದ ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ನಿರೀಕ್ಷೆಗೂ ಮೀರಿ ಉದ್ಯೋಗಾಕಾಂಕ್ಷಿಗಳು ಆಗಮಿಸಿದ್ದರಿಂದ ದಟ್ಟಣೆ ಉಂಟಾಯಿತು. ಮಧ್ಯಾಹ್ನದ ವೇಳೆಗೆ ಇನ್ನಷ್ಟು ಹೆಚ್ಚಾಯಿತು. ಎಲ್ಲ ಕಂಪನಿಗಳ ಕೌಂಟರ್​ಗಳಲ್ಲೂ ಅಧಿಕ ಸಂಖ್ಯೆಯಲ್ಲಿ ಜನರಿದ್ದರು. ಇವರನ್ನೆಲ್ಲ ನಿಭಾಯಿಸುವುದೇ ಕಷ್ಟವೆಂಬ ಪರಿಸ್ಥಿತಿ ಉಂಟಾಯಿತು. ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಮೊದಲ ದಿನ 40 ಸಾವಿರದಷ್ಟು ಜನರ ನಿರೀಕ್ಷೆ ಮಾಡಿದ್ದೆವು. ಎಲ್ಲರಿಗೂ ಉದ್ಯೋಗ ಸಿಗವಂತಾಗಬೇಕು ಎಂದು ಆಯೋಜಕ ತಂಡದ ಸದಸ್ಯರೊಬ್ಬರು ತಿಳಿಸಿದರು.
ಸ್ಪರ್ಧೆ ಬಗ್ಗೆ ತಿಳಿಯಿತು:ತರಗತಿಯಲ್ಲಿ ಕಲಿಯುವುದಕ್ಕೂ, ಹೊರಬಂದು ಪ್ರಾಯೋಗಿಕವಾಗಿ ಕಲಿಯುವುದಕ್ಕೂ ಸಾಕಷ್ಟು ವ್ಯತ್ಯಾಸವಿರುತ್ತದೆ. ತರಗತಿಯಲ್ಲಿದ್ದಾಗ ಉದ್ಯೋಗಕ್ಕೆ ಸ್ಪರ್ಧೆ ಏರ್ಪಡುತ್ತದೆ ಎಂಬುದು ಗೊತ್ತಿತ್ತು. ಆದರೆ ಯಾವ ಮಟ್ಟದಲ್ಲಿ ಸ್ಪರ್ಧೆ ಇರಲಿದೆ ಎಂಬುದು ಉದ್ಯೋಗ ಮೇಳದಿಂದ ತಿಳಿದು ಬಂತು. ನಮ್ಮ ಪ್ರಾಯೋಗಿಕ ಜ್ಞಾನಮಟ್ಟವನ್ನು ಹೆಚ್ಚಿಸಲು ಇದು ಸಹಕಾರಿಯಾಗಿದೆ ಎಂಬುದು ಬಹುತೇಕ ಉದ್ಯೋಗಾಂಕ್ಷಿಗಳ ಅಭಿಪ್ರಾಯವಾಗಿತ್ತು.
ರಾಜ್ಯ ಸರ್ಕಾರ ನಿರುದ್ಯೋಗಿಗಳಿಗೆ ಯುವ ನಿಧಿ ನೀಡುವುದರ ಜತೆಗೆ ಉದ್ಯೋಗಾವಕಾಶವನ್ನು ಸೃಷ್ಟಿಸಲಿದೆ. ಉದ್ಯೋಗಕ್ಕೆ ಅಗತ್ಯ ಕೌಶಲಗಳನ್ನು ಒದಗಿಸಲು ತರಬೇತಿಗಾಗಿ ಸರ್ಕಾರದಿಂದಲೇ ಇನ್ನಷ್ಟು ಕೇಂದ್ರಗಳನ್ನು ಆರಂಭಿಸಲಾಗುವುದು.
ಸಿದ್ದರಾಮಯ್ಯ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
