ಕೋಟಾ: ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಾಸ್ಥಾನದ ಒಳಗೆ ಯುವನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಪೂರ್ವಾಹ್ನ ಬೆಳಕಿಗೆ ಬಂದಿದೆ.ಆತ್ನಹತ್ಯೆಗಿಡಾದ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35 ವ) ಎಂದು ಗುರುತಿಸಲಾಗಿದೆ. ಈತ ಸೆಂಟ್ರಿಂಗ್ ಕೆಲಸಗಳಿಗೆ ಹೋಗುತ್ತಿದ್ದರು.
ಚಂದ್ರ ಪೂಜಾರಿ ಅವರು ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು. ಪ್ರತಿ ದಿನ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಈತ ಇಲ್ಲಿನ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದರು.ಚಂದ್ರ ಪೂಜಾರಿ ಇತ್ತೀಚಿನ ದಿನಗಳಲ್ಲಿ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ. ದೇವಸ್ಥಾನದ ಬಾವಿಯ ಹಗ್ಗವನ್ನು ಉಪಯೋಗಿಸಿ ಚಂದ್ರ ಪೂಜಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಇಂದು ಪೂರ್ವಾಹ್ನ ದೇವಸ್ಥಾನದ ಕಸ ಗುಡಿಸುವ ಕೆಲಸಗಾರರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 17 =
Remember me
