ಬಳ್ಳಾರಿ:ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಆಯೋಜನೆ ಮಾಡಿದ್ದ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ಅನಾಥ ಶವವಾಗಿ ಪತ್ತೆಯಾಗಿದ್ದ. ಅಂಥದ್ದೇ ಒಂದು ಪ್ರಕರಣ ಇದೀಗ ಬಿಜೆಪಿ ಸಮಾವೇಶ ಸಂದರ್ಭದಲ್ಲಿ ಸಂಭವಿಸಿದೆ. ಬಿಜೆಪಿಯ ಎಸ್​ಸಿ-ಎಸ್​ಟಿ ಸಮಾವೇಶಕ್ಕೆ ಬಂದಿದ್ದ ಯುವಕನೊಬ್ಬ ನೀರುಪಾಲಾಗಿದ್ದಾನೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರಿ ತಾಲೂಕಿನ ಗೌರಿಪುರ ಗ್ರಾಮದ ಉಮಾಪತಿ (26) ಸಾವಿಗೀಡಾದ ಯುವಕ. ಬಳ್ಳಾರಿಯಲ್ಲಿ ನಡೆದ ಬಿಜೆಪಿಯ ಎಸ್​ಸಿ-ಎಸ್​ಟಿ ಸಮಾವೇಶಕ್ಕೆ ಬಂದಿದ್ದ ಈತ, ವೇದಿಕೆಯ ಹಿಂಭಾಗದ ಬಳಿ ಇರುವ ಕಾಲುವೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ.
ಇದನ್ನೂ ಓದಿ:ಕಾಂಗ್ರೆಸ್ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ಅನಾಥ ಶವವಾಗಿ ಪತ್ತೆ!; ಪೊಲೀಸರಿಂದ ಅಂತ್ಯಕ್ರಿಯೆ..
ಇಲ್ಲಿನ ಗೌತಮನಗರ ಸಮೀಪದ ಹೆಚ್​ಎಲ್​ಸಿ ಕಾಲುವೆಯಲ್ಲಿ ಕಾಲು ತೊಳೆದುಕೊಳ್ಳುವಾಗ ಆಯತಪ್ಪಿ ಬಿದ್ದಿದ್ದಾನೆ. ಕಾಲುವೆಯಲ್ಲಿ ಬಿದ್ದಿರುವ ಈತ ಕಾಣದಂತಾಗಿದ್ದು, ಯುವಕನ ಶವಕ್ಕಾಗಿ ಹುಡುಕಾಟ ಆರಂಭವಾಗಿದೆ. ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನರು; ಕತ್ತಲಲ್ಲಿ ಹರಿದ ಅಂಗಿಯಲ್ಲೇ ಪರಿಸ್ಥಿತಿ ವಿವರಿಸಿದ ಕುಮಾರಸ್ವಾಮಿ..

23 ವರ್ಷಗಳ ಕಾಲ ನಾಪತ್ತೆಯಾಗಿದ್ದ ತಂದೆ; ಸತ್ತು ಹೋಗಿದ್ದರೆಂದು ಭಾವಿಸಿದ್ದ ಮಕ್ಕಳಿಗೆ ಕೊನೆಗೂ ಸಿಕ್ಕ ಅಪ್ಪ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 18 =
Remember me
