ಬೆಂಗಳೂರು, ಮಾ.21:“ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಇದನ್ನೂ ಓದಿ:ಸಾಗುವಳಿ ಚೀಟಿಗಾಗಿ ರೈತರ ಪ್ರತಿಭಟನೆ
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂದು ಕೇಳಿದಾಗ “ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು” ಎಂದರು.
ಇಂದು ಸಂಜೆ ಅಂತಿಮ ಪಟ್ಟಿ:
“ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದ್ದು ಇಂದು (ಗುರುವಾರ) ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ” ಎಂದರು.
ನಾಲ್ಕು ಕ್ಷೇತ್ರಗಳಲ್ಲಿ ಗೊಂದಲ ಉಂಟಾಗಿದೆ ಎಂದಾಗ “ನಾಲ್ಕು ಕ್ಷೇತ್ರಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.
ಇದನ್ನೂ ಓದಿ:2510ರಿಂದ 265ಕ್ಕೆ ಕುಸಿದ ರಿಲಯನ್ಸ್​ ಷೇರು: ಅನಿಲ್ ಅಂಬಾನಿ ಕಂಪನಿಯ ಸ್ಟಾಕ್​ಗೆ ಈಗ ಎಲ್ಲಿಲ್ಲದ ಬೇಡಿಕೆ ಏಕೆ?
ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಸಚಿವನಾಗಿದ್ದೇನೆ:
ಡಿಎಂಕೆ ತನ್ನ ಪ್ರನಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ ಎಂದು ಕೇಳಿದಾಗ “ಅವರ ರಾಜ್ಯದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ. ಅವರು ನಮಗೆ ನ್ಯಾಯ ಕೊಡಲೇ ಬೇಕು. ಕೋರ್ಟಿನಲ್ಲೂ ನಮಗೆ ನ್ಯಾಯ ಸಿಗುತ್ತದೆ” ಎಂದು ಹೇಳಿದರು.
“ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಅವರಿಗೂ ಒಳ್ಳೆಯದು ಆಗಲಿ ಎಂದು ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ” ಎಂದರು.
ಇದನ್ನೂ ಓದಿ:ದೇಶಕ್ಕೆ ಸಮರ್ಥ ನಾಯಕ ಯಾರು? ರಾಹುಲ್​ ಗಾಂಧಿ Vs ನರೇಂದ್ರ ಮೋದಿ
ಬಿಜೆಪಿ ಸ್ವಚ್ಚಗೊಳಿಸುತ್ತೇನೆ ಎನ್ನುವ ಸದಾನಂದಗೌಡರ ಹೇಳಿಕೆ ಬಗ್ಗೆ ಕೇಳಿದಾಗ “ಅವರು ಅನುಭವದಿಂದ ಈ ಮಾತನ್ನು ಹೇಳಿದ್ದಾರೆ. ಅನುಭವ ಮನುಷ್ಯನನ್ನು ಮಾಗಿಸುತ್ತದೆ” ಎಂದರು.
ಧಾರ್ಮಿಕ ಸಂಸ್ಥೆಗಳ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದಾಗ “ಈ ವಿಚಾರದಲ್ಲಿ ಬಿಜೆಪಿಯದ್ದು ಇಬ್ಬಗೆಯ ನೀತಿ. ಸಣ್ಣ, ಸಣ್ಣ ದೇವಾಲಯಗಳ, ಅರ್ಚಕರ ಅಭಿವೃದ್ದಿಗೆ ಪೂರಕವಾಗಿದ್ದ ಈ ಮಸೂದೆಯನ್ನು ಬಿಜೆಪಿ ವಿರೋಧಿಸಿ ತನ್ನ ನಿಜ ಬಣ್ಣವನ್ನು ಬಯಲುಮಾಡಿಕೊಂಡಿದೆ. ಮುಂದಿನ ಜೂನ್ ತಿಂಗಳ ಅಧಿವೇಶನದಲ್ಲಿ ಬಹುಮತ ಸಿಗಲಿದೆ” ಎಂದು ಉತ್ತರಿಸಿದರು.
ಒಳ್ಳೆಯ ಕಂಟೆಂಟ್ ಇದ್ದರೂ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳಿಗಿಲ್ಲ ಉಳಿವು! ಹೀಗಾದರೆ….

ಶ್ರೀಲೀಲಾ ಜತೆ ನಟಿಸಲು ಸ್ಟಾರ್​ ನಟರಿಗೆ ಚಿಂತೆ! ಇದು ಮುಂದುವರಿದ್ರೆ ‘ಕಿಸ್’​ ಬೆಡಗಿಗೆ ಸಂಕಷ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
