ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಸೇರಿದಂತೆ 19 ಮಂದಿ ಅರ್ಓಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು, ದಿನ ಕಳೆದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೆಸರು ಹಾಗೂ ವಿಚಾರಗಳು ಕೇಳಿ ಬರುತ್ತಿವೆ. ಇನ್ನೂ ನಟ ದರ್ಶನ್​ ಮತ್ತು ಗ್ಯಾಂಗ್​ ಎಸಗಿರುವ ಕೃತ್ಯವನ್ನು ಹಲವರು ಖಂಡಿಸುತ್ತಿರುವ ನಡುವೆಯೇ ಮದ್ದೂರು ಕ್ಷೇತ್ರದ ಕಾಂಗ್ರೆಸ್​ ಶಾಸಕ ಕದಲೂರು ಉದಯ್​ ಸಮರ್ಥಿಸಿಕೊಳ್ಳುವ ರೀತಿ ಹೇಳಿಕೆ ನೀಡಿದ್ದು, ಕೆಂಗಣ್ಣಿಗೆ ಗುರಿಯಾಗಿದೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಉದಯ್​, ನನಗೆ ಹಲವು ವರ್ಷಗಳಿಂದ ದರ್ಶನ್​ ಸ್ನೇಹಿತನಾಗಿದ್ದು, ಈ ರೀತಿ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲಾ. ನಾನು ನೋಡಿದಂತೆ ಆತ ಕೊಲೆ ಮಾಡುವಷ್ಟು ಕ್ರೂರಿಯಲ್ಲ. ಅವರ ಜೊತೆಗಿರುವವರು ಮಾಡಿ ಇವರ ಮೇಲೆ ಏನಾದ್ರು ಹಾಕಿದ್ರಾ ಗೊತ್ತಿಲ್ಲ. ತನಿಖೆಯಿಂದ ಎಲ್ಲವೂ ಹೊರಗೆ ಬರಬೇಕು. ನಾನು ಈಗಲೇ ಏನನ್ನೂ‌ ಹೇಳೋಕೆ ಆಗಲ್ಲ.ಆತ ಅಭಿಮಾನಿಗಳು ಹಾಗೂ ಮಾಧ್ಯಮದವರ ಬಳಿ ಸ್ವಲ್ಪ ಮುಂಗೋಪದಿಂದ ಮಾತನಾಡುತ್ತಾನೆ ಅಷ್ಟೇ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆ ನಡೆದು ಸತ್ಯ ಹೊರಗೆ ಬರಲಿ ರಾಜ್ಯದ ಜನರಿಗೂ‌ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ದರ್ಶನ್​ ಮತ್ತು ಸಹಚರರು ನನ್ನ ಗನ್​ಮ್ಯಾನ್​ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಸುಳ್ಳು ಸುದ್ದಿ. ಆ ರೀತಿಯ ಘಟನೆಯೇ ನಡೆದಿಲ್ಲಾ. ನನಗೆ ಐದಾರು ಮಂದಿ ಗನ್ ಮ್ಯಾನ್ ಇದ್ದಾರೆ. ಹಲ್ಲೆ ಮಾಡಿದ್ದರೆ ನನಗೆ ಗೊತ್ತಾಗುತ್ತಿರಲಿಲ್ವೇ ಆ ರೀತಿ ಏನೂ ಆಗಿಲ್ಲ. ಅದೆಲ್ಲವೂ‌ ಸುಳ್ಳು ಎಂದು ಮದ್ದೂರು ಕ್ಷೇತ್ರದ ಕಾಂಗ್ರೆಸ್​ ಶಾಸಕ ಕದಲೂರು ಉದಯ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 7 =
Remember me
